Thursday, July 9, 2026
Thursday, July 9, 2026

ಜಿಲ್ಲಾಧಿಕಾರಿಗಳಿಂದ ಶಿವಮೊಗ್ಗ ನಗರದ ಮಳೆಹಾನಿ ಪ್ರದೇಶಗಳಿಗೆ ಭೇಟಿ

Date:

ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ತಹಶೀಲ್ದಾರ್, ಕರ್ನಾಟಕ ನೀರಾವರಿ ನಿಗಮ ಹಾಗೂ ಇತರೆ ಅಧಿಕಾರಿಗಳೊಂದಿಗೆ ಶಿವಮೊಗ್ಗ ನಗರದಲ್ಲಿ ಮಳೆಯಿಂದ ಹಾನಿಗೀಡಾದ ಕೆಲವು ಪ್ರದೇಶಗಳಿಗೆ ತೆರಳಿ, ಪರಿಹಾರ ಕಾರ್ಯಗಳ ಕುರಿತು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.

ಗುರುಪುರ ಸಮೀಪದ ಶಾಂತಮ್ಮ ಲೇಔಟ್ ಮತ್ತು ಹೊಳೆಹೊನ್ನೂರು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ರಿಂಗ್‍ರಸ್ತೆ ಸಮೀಪದ ರಸ್ತೆ ಹಾಗೂ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿರುವ ಕಾರಣ ಜಿಲ್ಲಾಧಿಕಾರಿಗಳು ನೀರಿನ ಒಳ ಹರಿವಿನ ಪರಿಶೀಲನೆಯನ್ನು ಕೈಗೊಂಡು, ಇಸ್ಲಾಪುರದ ಚಾನಲ್‍ನಲ್ಲಿನ ನೀರಿನ ಹರಿವು ಮತ್ತು ಹರಿಗೆ ಕೆರೆಯ ಕೋಡಿಗೆ ಸ್ವತಃ ಭೇಟಿ ನೀಡಿದ್ದಾರೆ. ಭೇಟಿ ನೀಡಿದ ಸಂದರ್ಭದಲ್ಲಿ ಚಾನಲ್‍ನಲ್ಲಿ ಕಸ ತುಂಬಿರುವುದನ್ನು ಪರಿಶೀಲಿಸಿ ಕಸವನ್ನು ತೆಗೆಸುವಂತೆ ಕೆಎನ್‍ಎನ್‍ಎಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸ್ಥಳದಲ್ಲಿ ಜೆಸಿಬಿ ಮೂಲಕ ಕಸ ತೆಗೆಯುವ ಕೆಲಸವನ್ನು ಪರಿಶೀಲಿಸಿದ್ದಾರೆ. ಸ್ಥಳೀಯರೊಂದಿಗೆ ಸಮಸ್ಯೆಗಳ ಕುರಿತು ಚರ್ಚಿಸಿದ್ದಾರೆ.

ಈ ಸಂದರ್ಭದಲ್ಲಿ ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ನಾಗರಾಜ್, ಕೆಎನ್‍ಎನ್‍ಎಲ್ ಅಧಿಕಾರಿಗಳು ಇನ್ನೂ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...