Sunday, October 11, 2026
Sunday, October 11, 2026

ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯುತ್ ಕಂಬಗಳ ಬಾಕ್ಸ್ ಬಳಿ ಸುಳಿಯದಂತೆ ಎಚ್ಚರಿಕೆ

Date:

ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಅನೇಕ ಮನೆಗಳಿಗೆ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ಅಂತಹ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ತಾತ್ಕಾಲಿಕವಾಗಿ ಕಡಿತ ಮಾಡಲಾಗಿದೆ.

ಮಳೆ ನೀರು ಇಳಿಕೆಯಾದ ತಕ್ಷಣ ಅಂತಹ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವನ್ನು ಪುನರ್ ಕಲ್ಪಿಸಲಾಗುತ್ತದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ವೀರೇಂದ್ರ ಅವರು ಮನವಿ ಮಾಡಿದ್ದಾರೆ.

ಮಳೆಯ ನೀರು ನಿಂತಿರುವ ಕಡೆಗಳಲ್ಲಿ ಸಾರ್ವಜನಿಕರು ವಿದ್ಯುತ್ ಕಂಬ ಅಥವಾ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಯುಜಿ ವಿತರಣಾ ಘಟಕ ಅಥವಾ ಬಾಕ್ಸ್ ಹತ್ತಿರ ತೆರಳಬಾರದು. ವಿದ್ಯುತ್ ಉಪಕರಣಗಳಿಂದ ಆದಷ್ಟು ದೂರವಿದ್ದರೆ ಅನಾಹುತ ಸಂಭವಿಸುವುದನ್ನು ತಡೆಗಟ್ಟಬಹುದು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...