ದಾವಣಗೆರೆ ಜಿಲ್ಲೆಯಲ್ಲಿ ಗುರುವಾರ ಸುರಿದ ಭಾರಿ ಮಳೆಯಿಂದಾಗಿ ಚನ್ನಗಿರಿ ತಾಲ್ಲೂಕಿನ ಹಲವು ಗ್ರಾಮಗಳಿಗೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚನ್ನಗಿರಿ ತಾಲ್ಲೂಕಿನ ಕತ್ತಲಗೆರೆ ಗ್ರಾಮದ ಮುಸ್ಲಿಂ ಕಾಲೋನಿಯಲ್ಲಿ ಒಂದು ಮನೆ ಸಂಪೂರ್ಣ ಹಾನಿಯಾಗಿರುವುದು ಮತ್ತು ಕೋಟೆಹಾಳ್ ಗ್ರಾಮದಲ್ಲಿನ ಮನೆಯೊಂದರಲ್ಲಿ ನೀರು ನುಗ್ಗಿರುವುದನ್ನು ಪರಿಶೀಲಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್, ಚನ್ನಗಿರಿ ತಹಶೀಲ್ದಾರ್ ಪುಟ್ಟರಾಜು ಗೌಡ, ರೈತ ಮುಖಂಡ ತೇಜಸ್ವಿ ಪಟೇಲ್ ಉಪಸ್ಥಿತರಿದ್ದರು.