ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್ಇಟಿ)ಯ ಇಬ್ಬರು ಸ್ಥಳೀಯ ಉಗ್ರರನ್ನು ಶ್ರೀನಗರದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳೊಂದಿಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇವರಿಬ್ಬರಿಂದ 15 ಪಿಸ್ತೂಲ್ 30,300 ರೌಂಡ್ ಗೊಂಡುಗಳು ಮತ್ತು ಸೈಲೆನ್ಸರ್ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ತಿಳಿಸಿದ್ದಾರೆ.
ಹೈಬ್ರಿಡ್ ಉಗ್ರಗಾಮಿಗಳು ಎಂದು ಪರಿಗಣಿಸಲಾಗಿದ್ದು ,ಭಯೋತ್ಪಾದಕ ದಾಳಿಯನ್ನು ನಡೆಸಿ ನಂತರ ದಿನನಿತ್ಯದ ಜೀವನ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೋಲಿಸರು ತಿಳಿಸಿದ್ದಾರೆ.
ಇದು ಪೊಲೀಸರಿಗೆ ದೊಡ್ಡ ಯಶಸ್ಸು ಎಂದು ಐಜಿಪಿ ಅವರು ತಿಳಿಸಿದ್ದಾರೆ.