Monday, December 15, 2025
Monday, December 15, 2025

‘ಶಾ’ಣಕ್ಯರಿಂದ ರಾಜ್ಯದ ಹಾಲಿ ವಿಧಾನ ಸಭಾ ಸದಸ್ಯರ ಮೌಲ್ಯಮಾಪನ

Date:

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ಕೇವಲ ಒಂದೇ ಒಂದು ವರ್ಷ ಬಾಕಿ ಇದೆ. ರಾಜ್ಯದಲ್ಲಿ ಸ್ವತಂತ್ರವಾಗಿ ಪಕ್ಷವನ್ನು ಅಧಿಕಾರಕ್ಕೆ ತರಲು ಬಿಜೆಪಿ ಹೈಕಮಾಂಡ್ ತನ್ನದೇ ಆದ ಕಾರ್ಯತಂತ್ರ ರೂಪಿಸುತ್ತಿದೆ.

ರಾಜ್ಯದ 30 ಕ್ಷೇತ್ರಗಳಲ್ಲಿರುವ ಬಿಜೆಪಿಯ ಹಾಲಿ ಶಾಸಕರಿಗೆ ಕೋಕ್ ನೀಡಿ, ಹೊಸ ಮುಖಗಳಿಗೆ ಟಿಕೆಟ್ ನೀಡಲು ಗಂಭೀರ ಚಿಂತನೆ ಪಕ್ಷದಲ್ಲಿ ನಡೆದಿವೆ ಎಂದು ಬಿಜೆಪಿ ಉನ್ನತ ಮೂಲಗಳು ಖಚಿತಪಡಿಸಿವೆ.

ಕೇಂದ್ರ ಗೃಹಸಚಿವ ಅಮಿತ್ ಶಾ ಸೂಚನೆ ಮೇರೆಗೆ ಖಾಸಗಿ ಏಜೆನ್ಸಿಯ 150 ಸದಸ್ಯರು ರಾಜ್ಯದಲ್ಲಿ ಠಿಕಾಣಿ ಹೂಡಿ ಸಮೀಕ್ಷೆ ನಡೆಸಿದ್ದಾರೆ. ಮೇ 1ರಂದು ರಾಜ್ಯಕ್ಕೆ ಭೇಟಿ ನೀಡಿದ್ದ ಈ ತಂಡ ಮೇ 15ರವರೆಗೆ ಪ್ರತಿ ವಿಧಾನಸಭೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ. ಗೌಪ್ಯವಾಗಿ ನಡೆದ ಸಮೀಕ್ಷಾ ವರದಿಯನ್ನು ಕೇಂದ್ರ ಸಚಿವ ಅಮಿತ್ ಶಾಗೆ ಸಲ್ಲಿಸಿದೆ ಎಂದು ಹೇಳಲಾಗಿದೆ.

ಕಳೆದೊಂದು ದಶಕದಿಂದ ದೇಶದಲ್ಲಿ ಬಿಜೆಪಿ ವರ್ಚಸ್ಸು ಹೆಚ್ಚಿದೆ. ಅನೇಕ ರಾಜ್ಯಗಳಲ್ಲಿ ಬಿಜೆಪಿ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿದೆ. ದಕ್ಷಿಣ ಭಾರತದಲ್ಲಿ ಕರ್ನಾಟಕ ಬಿಟ್ಟರೆ ಬೇರೆ ರಾಜ್ಯಗಳಲ್ಲಿ ಬಿಜೆಪಿ ಸಂಘಟನಾತ್ಮಕವಾಗಿ ಬೆಳೆದಿಲ್ಲ. ಆದ್ದರಿಂದ, ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಸ್ವತಂತ್ರವಾಗಿ ಅಧಿಕಾರಕ್ಕೆ ತರಲು ಬಿಜೆಪಿ ದೊಡ್ಡದೊಂದು ಉಪಾಯ ಮಾಡಿದೆ. ಅದಕ್ಕಾಗಿಯೇ ಅಮಿತ್ ಶಾ ರಾಜ್ಯದಲ್ಲಿ ಖಾಸಗಿ ಏಜೆನ್ಸಿಯಿಂದ ಸರ್ವೆ ಮಾಡಿಸಿದ್ದಾರೆ ಎನ್ನಲಾಗುತ್ತದೆ.

ಸಮೀಕ್ಷಾ ವರದಿ ಅಮಿತ್ ಶಾ ಕೈ ಸೇರಿದೆ. ರಾಜ್ಯದ 30 ಕ್ಷೇತ್ರದ ಹಾಲಿ ಶಾಸಕರಿಗೆ ಮುಂದಿನ ಚುನಾವಣೆಯಲ್ಲಿ ಕೋಕ್ ನೀಡಬೇಕು. ಹೊಸ ಮುಖಗಳಿಗೆ ಅವಕಾಶ ನೀಡಬೇಕು. ಅದರಿಂದ ಬಿಜೆಪಿ ಮತ್ತಷ್ಟು ಸಂಘಟನಾತ್ಮಕವಾಗಿ ಬೆಳೆಯಲು ಅನುಕೂಲವಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಜನರ ಸಮಸ್ಯೆಗೆ ಸ್ಪಂದಿಸದ, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸದ, ಸಂಘಟನೆಯಲ್ಲಿ ತೊಡಗದ ರಾಜ್ಯದ 30 ಹಾಲಿ ಶಾಸಕರನ್ನು ಈ ತಂಡ ಪಟ್ಟಿ ಮಾಡಿದೆ. ಮುಂದಿನ ಚುನಾವಣೆಯಲ್ಲಿ ಇವರಿಗೆ ಟಿಕೆಟ್ ನೀಡಿದರೆ ಅಲ್ಲಿ ಪಕ್ಷಕ್ಕೆ ಹಿನ್ನಡೆ ಆಗಲಿದೆ ಎಂದೂ ಈ ತಂಡ ವರದಿಯಲ್ಲಿ ಸಲಹೆ ನೀಡಿದೆ ಎಂದು ಮೂಲಗಳು ಖಚಿತಪಡಿಸಿವೆ.

ಖಾಸಗಿ ಏಜೆನ್ಸಿ ನೀಡಿದ ವರದಿ ಅನುಷ್ಠಾನವಾದರೆ ರಾಜ್ಯದ 30 ಹಾಲಿ ಬಿಜೆಪಿ ಶಾಸಕರು ಮುಂದಿನ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...