ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಕೇಂದ್ರ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ. ದೇಶದ ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ರಕ್ಷಣೆಯಾಗಬೇಕಿದ್ದರೆ ಕೇಂದ್ರದ ಸಂಸ್ಥೆಗಳಿಗೆ ಸ್ವಾಯತ್ತೆ ನೀಡಬೇಕು ಎಂದೂ ಪ್ರತಿಪಾದಿಸಿದ್ದಾರೆ.
ಕೇಂದ್ರ ಸಂಸ್ಥೆಗಳಿಗೆ ಕೆಲಸ ಮಾಡಲಾಗುತ್ತಿಲ್ಲ. ಯಾಕೆಂದರೆ ಅವುಗಳಿಗೆ ಸ್ವಾಯತ್ತೆ ಇಲ್ಲ. ಸ್ವಾಯತ್ತೆ ಎಂಬುದು ಇಬ್ಬರು ವ್ಯಕ್ತಿಗಳು ಹಾಗೂ ಬಿಜೆಪಿ ಕೈಯಲ್ಲಿದೆ. ಅಡಾಲ್ಫ್ ಹಿಟ್ಲರ್, ಜೋಸೆಫ್ ಸ್ಟಾಲಿನ್, ಬೆನಿಟೊ ಮುಸ್ಸೊಲಿನಿ ಅವರಂಥ ಸರ್ವಾಧಿಕಾರಿಗಳ ಆಡಳಿತದ ಸಂದರ್ಭದಲ್ಲೇ ಈ ಮಟ್ಟದ ರಾಜಕೀಯ ಹಸ್ತಕ್ಷೇಪ ಇರಲಿಲ್ಲ ಎಂದು ಮಮತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಗಳ ವಿಚಾರದಲ್ಲಿ ಮಧ್ಯಪ್ರವೇಶಿಸುವುದನ್ನು ಖಂಡಿಸಿರುವ ಅವರು, ಬಿಜೆಪಿ ಆಡಳಿತದಲ್ಲಿ ಸರ್ವಾಧಿಕಾರಿಗಳಾದ ಅಡಾಲ್ಫ್ ಹಿಟ್ಲರ್, ಜೋಸೆಫ್ ಸ್ಟಾಲಿನ್, ಬೆನಿಟೊ ಮುಸ್ಸೊಲಿನಿ ಆಳ್ವಿಕೆಗಿಂತಲೂ ಹೀನಾಯ ಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದ್ದಾರೆ.