Wednesday, March 19, 2025
Wednesday, March 19, 2025

ರಫ್ತು ನಿರ್ಬಂಧ ಹೇರಿಕೆ:ಏರುತ್ತಿರುವ ಸಕ್ಕರೆ ಬೆಲೆಗೆ ಕಡಿವಾಣ

Date:

ಕಳೆದ 6 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತ ಸರ್ಕಾರವು ಸಕ್ಕರೆ ರಫ್ತಿಗೆ ನಿರ್ಬಂಧ ವಿಧಿಸಿದೆ. ಈ ಬಾರಿಯ ಸಕ್ಕರೆ ಹಂಗಾಮಿನಲ್ಲಿ ರಫ್ತು ಪ್ರಮಾಣವನ್ನು 1 ಕೋಟಿ ಟನ್​ಗೆ ಮಿತಗೊಳಿಸಲಾಗಿದೆ.

ಹಲವು ಸಕ್ಕರೆ ಕಾರ್ಖಾನೆಗಳು ತಮ್ಮ ಬಳಿಯಿದ್ದ ದಾಸ್ತಾನನ್ನು ವಿಶ್ವ ಮಾರುಕಟ್ಟೆಯಲ್ಲಿ ಗರಿಷ್ಠ ಪ್ರಮಾಣಕ್ಕೆ ಮಾರಾಟ ಮಾಡಲು ಮುಂದಾದ ಹಿನ್ನೆಲೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ಹಿಡಿತದಲ್ಲಿ ಇರಿಸಲು ಕೇಂದ್ರ ಸರ್ಕಾರವು ಈ ನಿರ್ಧಾರ ತೆಗೆದುಕೊಂಡಿದೆ.

ಜೂನ್ 1ರಿಂದ ಅಕ್ಟೋಬರ್ 31ರ ನಡುವಣ ಅವಧಿಯಲ್ಲಿ ವಿದೇಶಗಳಿಗೆ ಸಕ್ಕರೆ ರಫ್ತು ಮಾಡುವ ಮೊದಲು ತನ್ನ ಅನುಮತಿ ಪಡೆಯುವುದು ಕಡ್ಡಾಯ ಎಂದು ಭಾರತ ಸರ್ಕಾರವು ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ವಿಶ್ವದ ಅತ್ಯಂತ ದೊಡ್ಡ ಸಕ್ಕರೆ ಉತ್ಪಾದಕ ದೇಶವಾಗಿರುವ ಭಾರತವು ಎರಡನೇ ಅತಿ ಹೆಚ್ಚು ಪ್ರಮಾಣದ ಸಕ್ಕರೆ ರಫ್ತು ಮಾಡುವ ದೇಶವೂ ಹೌದು. ಬ್ರೆಜಿಲ್ ವಿಶ್ವದಲ್ಲಿ ಅತಿಹೆಚ್ಚು ಸಕ್ಕರೆ ರಫ್ತು ಮಾಡುವ ದೇಶ ಎನಿಸಿದೆ.

ಸಕ್ಕರೆ ರಫ್ತಿಗೆ ಭಾರತ ಸರ್ಕಾರವು ಕಡಿವಾಣ ಹಾಕಬಹುದು ಎಂದು ಕಳೆದ ಮಾರ್ಚ್ ತಿಂಗಳಲ್ಲಿ ರಾಯಿಟರ್ಸ್ ಸುದ್ದಿಸಂಸ್ಥೆಯು ವರದಿ ಮಾಡಿತ್ತು. ಸ್ಥಳೀಯ ಮಾರುಕಟ್ಟೆಯಲ್ಲಿ ಬೆಲೆಏರಿಕೆಗೆ ಕಡಿವಾಣ ಹಾಕುವುದು. ಹಾಗೂ ನಿರಂತರ ಪೂರೈಕೆಯನ್ನು ಖಾತ್ರಿಪಡಿಸಿಕೊಳ್ಳುವ ಉದ್ದೇಶದಿಂದ ಭಾರತ ಸರ್ಕಾರವು ಇಂಥ ಕ್ರಮ ತೆಗೆದುಕೊಳ್ಳಬಹುದು ಎಂದು ವಿಶ್ಲೇಷಿಸಲಾಗಿತ್ತು.

ಸಕ್ಕರೆ ರಫ್ತು ನಿಷೇಧದ ಆದೇಶವನ್ನು ಭಾರತ ಸರ್ಕಾರವು ಪ್ರಕಟಿಸಿದ ನಂತರ ಲಂಡನ್​ನಲ್ಲಿ ಸಕ್ಕರೆ ವಹಿವಾಟಿನ ಮಾನದಂಡವಾಗಿ ಬಳಸುವ ಬಿಳಿ ಸಕ್ಕರೆ ಬೆಲೆಯು ಶೇ.1ರಷ್ಟು ಹೆಚ್ಚಾಗಿದೆ. ಭಾರತದಲ್ಲಿ ಪ್ರತಿವರ್ಷವೂ ಹಬ್ಬಸಾಲಿನಲ್ಲಿ ಸಕ್ಕರೆಗೆ ಬೇಡಿಕೆ ಹೆಚ್ಚಾಗುವುದು ವಾಡಿಕೆ. ಈ ಅವಧಿಯಲ್ಲಿ ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಸಕ್ಕರೆ ಇರಬೇಕು ಎನ್ನುವ ಕಾರಣಕ್ಕಾಗಿ ಸರ್ಕಾರವು ಇಂಥ ತೀರ್ಮಾನ ತೆಗೆದುಕೊಂಡಿದೆ ಎಂದು ಮುಂಬೈ ಮೂಲದ ಜಾಗತಿಕ ಸಕ್ಕರೆ ವಹಿವಾಟುದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.

1 ಕೋಟಿ ಟನ್​ನಷ್ಟು ಸಕ್ಕರೆಯನ್ನು ವಿಶ್ವ ಮಾರುಕಟ್ಟೆಯಲ್ಲಿ ಮಾರಲು ಅವಕಾಶ ಮಾಡಿಕೊಟ್ಟಿರುವುದು ಸಹ ಉತ್ತಮ ನಿರ್ಧಾರವೇ ಆಗಿದೆ. ಇದರಿಂದ ವಿಶ್ವದ ವಿವಿಧ ದೇಶಗಳಲ್ಲಿ ಸಕ್ಕರೆ ಬೆಲೆ ತಹಬಂದಿಗೆ ಬರಲಿದೆ ಎಂದು ನಿರೀಕ್ಷಿಸಲಾಗಿದೆ. ಆರಂಭದಲ್ಲಿ 80 ಲಕ್ಷ ಟನ್​ ಸಕ್ಕರೆ ರಫ್ತಿಗೆ ಮಿತಿ ವಿಧಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಆದರೆ ನಂತರದ ದಿನಗಳಲ್ಲಿ ದೇಶದಲ್ಲಿ ಈ ಬಾರಿ ಸಕ್ಕರೆ ಉತ್ಪಾದನೆ ಹೆಚ್ಚಾಗಬಹುದು ಎಂಬ ಪರಿಷ್ಕೃತ ಅಂದಾಜು ಸಿಕ್ಕ ಕಾರಣ, ರಫ್ತು ಮಿತಿಯನ್ನು 1 ಕೋಟಿ ಟನ್​ಗೆ ಹೆಚ್ಚಿಸುವ ನಿರ್ಧಾರ ತೆಗೆದುಕೊಂಡಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kumsi MESCOM ಕುಂಸಿ ಮೆಸ್ಕಾಂ ಕಛೇರಿಯಲ್ಲಿ ಮಾರ್ಚ್ 18. ಜನಸಂಪರ್ಕ ಸಭೆ

Kumsi MESCOM ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.18 ರಂದು ಬೆಳಿಗ್ಗೆ...

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...