Wednesday, August 26, 2026
Wednesday, August 26, 2026

ಲಡಾಖ್ ನಲ್ಲಿ ನದಿಗೆ ಉರುಳಿದ ಸೇನಾವಾಹನ : ಏಳು ಮಂದಿ ಮರಣ

Date:

ಲಡಾಖ್‌ನ ತುರ್ತುಕ್ ಸೆಕ್ಟರ್‌ನಲ್ಲಿರುವ ಶ್ಯೋಕ್ ನದಿಗೆ 26 ಯೋಧರನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ಬಿದ್ದಿದೆ.

ಇದರ ಪರಿಣಾಮ ಭಾರತೀಯ ಸೇನೆಯ ಕನಿಷ್ಠ ಏಳು ಯೋಧರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಯೋಧರ ಸಾವಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದುಃಖ ವ್ಯಕ್ತಪಡಿಸಿದ್ದು, ಗಾಯಗೊಂಡವರು ಶೀಘ್ರವೇ ಚೇತರಿಕೆಯಾಗಲಿ ಎಂದು ಹಾರೈಸಿದ್ದಾರೆ.
‘ನಮ್ಮ ಧೀರ ಯೋಧರ ಜೀವವನ್ನು ಕಸಿದುಕೊಂಡ ಲಡಾಖ್​​ನ ರಸ್ತೆ ಅಪಘಾತದ ಬಗ್ಗೆ ಕೇಳಿ ಅತೀವ ನೋವಾಗಿದೆ. ಸಾವಿಗೀಡಾದ ಯೋಧರ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ರಾಷ್ಟ್ರಪತಿಭವನದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

ನಮ್ಮ ಧೀರ ಯೋಧರ ಸಾವಿಗೆ ಕಾರಣವಾದ ಲಡಾಖ್ ಬಸ್ ಅಪಘಾತದ ಬಗ್ಗೆ ದುಃಖಿತನಾಗಿದ್ದೇನೆ. ಮೃತರ ಕುಟುಂಬದೊಂದಿಗೆ ನನ್ನ ಪ್ರಾರ್ಥನೆಗಳಿವೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ.ಇದಕ್ಕೆ ಅಗತ್ಯವಿರುವ ಎಲ್ಲ ಸಹಾಯವನ್ನು ಮಾಡಲಾಗುವುದು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಅಪಘಾತದಲ್ಲಿ ಹತ್ತೊಂಬತ್ತು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರೆಲ್ಲರನ್ನೂ ಪಂಚಕುಲದಲ್ಲಿರುವ ಸೇನೆಯ ವೆಸ್ಟರ್ನ್ ಕಮಾಂಡ್ ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡಲಾಗಿದೆ.

ನುಬ್ರಾದಿಂದ ತುರ್ತುಕ್‌ಗೆ ಸೇನಾ ಪಡೆಗಳನ್ನು ಹೊತ್ತೊಯ್ಯುತ್ತಿದ್ದ ವಾಹನವು ಲಾರ್ಗ್ಯಾಬ್, ಪಚ್ಚತಾಂಗ್ ಬಳಿ ನದಿಗೆ ಬಿದ್ದಿದೆ.

ಲಡಾಖ್​​ನಲ್ಲಿ ಸೇನಾವಾಹನ ಅಪಘಾತದ ಬಗ್ಗೆ ಕೇಳಿ ಅತೀವ ದುಃಖವಾಗಿದೆ. ಮೃತರ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡ ಯೋಧರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ನಾನು ಆಶಿಸುತ್ತೇನೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ವಾಹನವು ಸ್ಕಿಡ್ ಆಗಿ ಸುಮಾರು ,50ರಿಂದ 60 ಅಡಿ ಆಳದ ಶ್ಯೋಕ್ ನದಿಗೆ ಉರುಳಿ ಬಿದ್ದಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa “ಮನರಂಜನೆ” ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...