Tuesday, August 25, 2026
Tuesday, August 25, 2026

ಅಂಗನವಾಡಿಗಳಿಗೆ ಕಳಪೆ ಆಹಾರ ಸರಬರಾಜು: ತಕ್ಷಣ ನಿಲ್ಲಿಸಿ-ಕೋರ್ಟ್ ಸೂಚನೆ

Date:

ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆಯ ಮೂಲಕ ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡುತ್ತಿರುವ ಕಳಪೆ ಗುಣಮಟ್ಟದ ಆಹಾರವನ್ನು ಕೂಡಲೇ ಸ್ಥಗಿತಗೊಳಿಸುವಂತೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.

ಪರಿಷ್ಕೃತ ಪೌಷ್ಟಿಕಾಂಶ ಹಾಗೂ ಆಹಾರದ ಮಾನದಂಡಗಳ ನಿರ್ದಿಷ್ಟತೆ ಮತ್ತು ಮಾನದಂಡಗಳಿಗೆ ಅನುಗುಣವಾಗಿಲ್ಲದ ಆಹಾರ ಉತ್ಪನ್ನಗಳನ್ನು ಯಾವುದೇ ಕಾರಣಕ್ಕೂ ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡಬಾರದು ಎಂದೂ ಸಹ ನ್ಯಾಯಾಲಯ ತಾಕೀತು ಮಾಡಿದೆ.

ಸಂಗೀತಾ ಗದಗಿನ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಐಸಿಡಿಎಸ್ ಚಟುವಟಿಕೆಯಲ್ಲಿ ತೊಡಗಿರುವ ಮಹಿಳಾ ಸಂಘಟನೆಗಳು ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಇತ್ಯರ್ಥಪಡಿಸಿದ ವೇಳೆ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಮತ್ತು ನ್ಯಾಯಮೂರ್ತಿ ಎಸ್. ಆರ್. ಕೃಷ್ಣಕುಮಾರ್ ವಿಭಾಗೀಯಪೀಠ ಈ ಅದೇಶವನ್ನು ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...