ಎಸ್ಸಿ-ಎಸ್ಟಿ ಬಡ ಕುಟುಂಬಗಳಿಗೆ 75 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಯೋಜನೆಗೆ ಬೆಂಗಳೂರಿನಲ್ಲಿ ಸಿಎಂ ಅನುಮೋದನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಬಾಬು ಜಗಜೀವನ್ 115ನೇ ಜಯಂತಿ ಅಂಗವಾಗಿ ಈ ಹಿಂದೆ ಭಾಗ್ಯಜ್ಯೋತಿ ಮತ್ತು ಕುಟೀರಜ್ಯೋತಿ ಯೋಜನೆಯಡಿ ಈ ಹಿಂದೆ ನೀಡಲಾಗುತ್ತಿದ್ದ 40 ಯೂನಿಟ್ ಉಚಿತ ವಿದ್ಯುತ್ ಯೋಜನೆಯನ್ನು 75 ಯೂನಿಟ್ಗೆ ಹೆಚ್ಚಿಸಲಾಗಿದೆ.
ಮೇ 1ರಿಂದ ಪೂರ್ವಾನ್ವಯ ಆಗುವಂತೆ ಈ ಆದೇಶ ಜಾರಿಗೆ ಬಂದಿದ್ದು, ನಗರ ಪ್ರದೇಶಕ್ಕೂ ಈ ಯೋಜನೆ ವಿಸ್ತರಿಸಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಗ್ರಾಮೀಣ ಪ್ರದೇಶಗಳಿಗೆ ಸೀಮಿತವಾಗಿದ್ದ ಈ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಲಾಗಿದೆ.
ಬಿಪಿಎಲ್ ಕುಟುಂಬಗಳಿಗೆ ಮಾತ್ರ ಅನ್ವಯ ಇದು ಅನ್ವಯವಾಗಲಿದೆ