ಸಿದ್ದರಾಮಯ್ಯನವರು ದ್ರಾವಿಡರಾ ? ಆರ್ಯರಾ? ಹಾಗೂ ನೆಹರೂ ಅವರನ್ನು ಮೋದಿಗೆ ಹೋಲಿಸಲು ಸಾಧ್ಯವೇ ಇಲ್ಲ ಎನ್ನುವ ಸಿಎಂ ಬೊಮ್ಮಾಯಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.
ಈ ಬಗ್ಗೆ ಸಿದ್ದರಾಮಯ್ಯನವರು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.
ಬಸವರಾಜ ಬೊಮ್ಮಾಯಿಯವರೇ, ನಾನು ಮಾತ್ರವಲ್ಲ, ನೀವೂ ದ್ರಾವಿಡರೇ ಆಗಿದ್ದೀರಿ. ಈ ಸ್ಪಷ್ಟತೆ ನನಗಿದೆ. ನಾನು ದ್ರಾವಿಡ ಮೂಲವನ್ನು ಉಳಿಸಿಕೊಂಡಿದ್ದೇನೆ. ನೀವು ಮಾತ್ರ ಅಧಿಕಾರದ ದುರಾಸೆಯಿಂದ ಮೂಲವನ್ನು ತೊರೆದು ಪಕ್ಷಾಂತರ ಮಾಡಿದ್ದೀರಿ ಎಂದಿದ್ದಾರೆ.
ಬೇಗ “ಘರ್ ವಾಪಸಿ”‘ ಆಗಿಬಿಡಿ.
ನೆಹರೂ ಅವರನ್ನು ಮೋದಿಗೆ ಹೋಲಿಸಲು ಸಾಧ್ಯವೇ ಇಲ್ಲ ಎಂದು ಮತ್ತೆ ಮತ್ತೆ ಹೇಳುತ್ತೇನೆ. ಇಬ್ಬರು ನಾಯಕರ ಸಾಧನೆ ಬಗ್ಗೆ ಮುಕ್ತ ಚರ್ಚೆಗೆ ನೀವು ಸಿದ್ಧ ಇದ್ದರೆ ನಾನೂ ಸಿದ್ಧನಿದ್ದೇನೆ. ನನ್ನ ಮಾತಿಗೆ ನೀವು ಖರೀದಿಸಿಟ್ಟಿರುವ ”ಟ್ರೋಲ್ ಗ್ಯಾಂಗ್” ಮೂಲಕ ಉತ್ತರ ಕೊಡಿಸಲು ಹೋಗಬೇಡಿ. ”ಭಾರತ ಮಾತೆ ತನ್ನ ಭಕ್ತನನ್ನು ಕಳೆದುಕೊಂಡಿದ್ದಾಳೆ, ಶಾಂತಿ ತನ್ನ ರಕ್ಷಕನನ್ನು ಕಳೆದುಕೊಂಡು ಅನಾಥಳಾಗಿದ್ದಾಳೆ, ನಿರಾಶ್ರಿತರು ತನ್ನ ಆಶ್ರಯದಾತನನ್ನು, ಸಾಮಾನ್ಯ ಜನ ತಮ್ಮ ಕಣ್ಮಣಿಯನ್ನು ಕಳೆದುಕೊಂಡಿದ್ದಾರೆ.. ಪರದಿ ಬಿದ್ದಿದೆ” -ಹೀಗೆಂದು ನೆಹರೂ ಸಾವಿಗೆ ಎ.ಬಿ.ವಾಜಪೇಯಿ ಕಂಬನಿ ಮಿಡಿದಿದ್ದನ್ನು ಹಿರಿಯ ಬಿಜೆಪಿ ನಾಯಕರಿಂದ ಕೇಳಿ ತಿಳಿದುಕೊಳ್ಳಿ ಎಂದಿದ್ದಾರೆ.