ಕರ್ನಾಟಕ ರಾಜ್ಯಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಸಹ ಒಂದು ಸ್ಥಾನಕ್ಕೆ ತನ್ನ ಅಭ್ಯರ್ಥಿ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಿದೆ.
ಜೈರಾಮ್ ರಮೇಶ್ 2016ರಲ್ಲಿ ಕರ್ನಾಟಕದಿಂದಲೇ ರಾಜ್ಯಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು. ಈಗ ಜೈರಾಮ್ ರಮೇಶ್ ಅವರೇ ಮತ್ತೊಮ್ಮೆ ಕರ್ನಾಟಕದಿಂದ ಕಾಂಗ್ರೆಸ್ ಅಭ್ಯರ್ಥಿಯಾಗ್ತಿದ್ದಾರೆ.
ಇದಕ್ಕೂ ಮೊದಲು ಜೈರಾಮ್ ರಮೇಶ್ ಅವರು ಪ್ರತ್ಯೇಕವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಕರ್ನಾಟಕ ರಾಜ್ಯಸಭೆಗೆ ಜೈರಾಮ್ ರಮೇಶ್ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ.
ಹಲವರ ವಿರೋಧದ ನಡುವೆ ಕಾಂಗ್ರೆಸ್ ಹೈಕಮಾಂಡ್ ಜೈರಾಮ್ ರಮೇಶ್ ಅವರಿಗೆ ಮಣೆ ಹಾಕಿದೆ.ರಾಜ್ಯಸಭೆಗೆ ರಾಜ್ಯದಿಂದ ಜೈರಾಮ್ ರಮೇಶ್ ಅವರನ್ನು ಪುನಾರಾಯ್ಕೆಯ ತೀರ್ಮಾನದ ವಿರುದ್ಧ ಕೆಪಿಸಿಸಿ ಹಿರಿಯ ನಾಯಕರಾದ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.