ಮಳೆ ಯಾವಾಗ ಆರಂಭವಾಗುತ್ತದೆ ಎಂದು ಯೋಚಿಸುತ್ತಿದ್ದ ರೈತರಿಗೆ ಜೂನ್ 2 ರಿಂದ ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.
ಜೂನ್ 2 ರಿಂದ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ . ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ನೈರುತ್ಯ ಮುಂಗಾರು ಮೇ. 29 ರ ಭಾನುವಾರ ಕೇರಳಕ್ಕೆ ಪ್ರವೇಶಿಸಿದೆ. ಜೂನ್ 1 ರಿಂದ ಕರ್ನಾಟಕಕ್ಕೆ ಪ್ರವೇಶವಾಗಲಿದೆ. ಜೂನ್ 2 ರಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಜೂನ್ 2 ರಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡಿನಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನ್ 2 ರ ರಾತ್ರಿ , ಜೂನ್ 3 ಕ್ಕೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,ರಾಮನಗರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ,ಉಡುಪಿ, ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.