ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವತಿಯಿಂದ 2022-23 ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸ್‍ಗಳ ಪ್ರವೇಶಕ್ಕೆ(ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅನುದಾನಿತ ಕೋರ್ಸ್‍ಗಳಾದ ಆರ್ಕಿಟೆಕ್ಟ್ ಅಸಿಸ್ಟೆಂಟ್‍ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ಹಾಗೂ ಅನುದಾನರಹಿತ ಕೋರ್ಸ್‍ಗಳಾದ ಜ್ಯುವೆಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್ಸ್ ಡಿಪ್ಲೋಮಾ ಕೋರ್ಸ್‍ಗಳಿಗೆ ಅರ್ಹರು ಜೂನ್ 20 ರೊಳಗೆ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಟ ಶೇ.35 ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದು, ಮೂಳೆ ಮತ್ತು ಕೀಲು ಅಂಗವಿಕಲತೆ ಶೇ.40 ಮತ್ತು ಮೇಲ್ಪಟ್ಟು, ಕಿವುಡು ಮತ್ತು ಮೂಗು ಅಂಗವಿಕಲತೆ 60 ಡಿಬಿ ಮತ್ತು ಮೇಲ್ಪಟ್ಟು ಹಾಗೂ ಭಾಗಶಃ ಮತ್ತು ಪೂರ್ಣ ಅಂಧತ್ವ ಲಕ್ಷಣಗಳಿರಬೇಕು.
ರಾಜ್ಯ ಮತ್ತು ರಾಷ್ಟ್ರಮಟ್ಟದ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್‍ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿದ್ಯಾರ್ಥಿನಿಲಯದ ಸೌಲಭ್ಯ ಕಲ್ಪಿಸಲಾಗಿದೆ.
ಅರ್ಜಿಗಳನ್ನು ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್, ಜೆಎಸ್‍ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಚಯ, ಮೈಸೂರು 570 006 ಇಲ್ಲಿ ಪಡೆದು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.100 ಹಾಗೂ ಎಸ್‍ಸಿ/ಎಸ್‍ಟಿ/ಸಿ-1 ವರ್ಗದವರಿಗೆ ರೂ.50 ನಗದು ಅಥವಾ ಡಿಡಿ ಮೂಲಕ ಮೈಸೂರಿನಲ್ಲಿ ಸಂದಾಯವಾಗುವಂತೆ ಕಳುಹಿಸಬಹುದು. ಅಥವಾ ವೆಬ್‍ಸೈಟ್ ಮೂಲಕ ಡೌನ್‍ಲೋಡ್ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ : www.jsspda.org ಇಮೇಲ್/ದೂರವಾಣಿ/ಮೊಬೈಲ್ ಸಂಖ್ಯೆ: 96866 77236 ಮೂಲಕ ಸಂಪರ್ಕಿಸಬಹುದು ಎಂದು ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಪ್ರಾಂಶುಪಾಲರು ತಿಳಿಸಿದ್ದಾರೆ.