ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದೆ.
ಶೀಘ್ರವೇ ರಾಜ್ಯದ ಎಲ್ಲ ಗ್ರಾಮಪಂಚಾಯಿಗಳಲ್ಲೂ `
ಪಂಚಾಯತ್ ಅಮೃತ ಆರೋಗ್ಯ ಯೋಜನೆ ಜಾರಿಗೆ ಬರಲಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಈಗಾಗಲೇ 14 ಜಿಲ್ಲೆಗಳ 2,816 ಗ್ರಾಮಪಂಚಾಯಿತಿಗಳಲ್ಲಿ ಪಂಚಾಯತ್ ಆರೋಗ್ಯ ಅಮೃತ ಆರೋಗ್ಯ ಯೋಜನೆ ಜಾರಿಯಲ್ಲಿದ್ದು, ಶೀಘ್ರವೇ ರಾಜ್ಯದ 3,146 ಗ್ರಾಮ ಪಂಚಾಯಿತಿಗಳಿಗೆ ವಿಸ್ತರಿಸಿ ಆರೋಗ್ಯ ಕಿಟ್‌ಗಳನ್ನು ವಿತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ಗ್ರಾಮೀಣ ಜನತೆಗೆ ಉತ್ತಮ ಆರೋಗ್ಯ ಜೀವನದ ಉದ್ದೇಶಕ್ಕಾಗಿ ಜಾರಿಗೆ ತಂದಿರುವ ಪಂಚಾಯತ್ ಅಮೃತ ಆರೋಗ್ಯ ಯೋಜನೆ ರಾಜ್ಯದ ಎಲ್ಲ ಗ್ರಾಮಪಂಚಾಯಿತಿಗಳಿಗೆ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.