Friday, April 10, 2026
Friday, April 10, 2026

ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿ: 47.83 ಲಕ್ಷ ರೈತ ಫಲಾನುಭವಿಗಳು

Date:

ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿಯೋಜನೆಯಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ರಾಜ್ಯದ 47.83 ಲಕ್ಷ ರೈತರಿಗೆ 956.71 ಕೋಟಿ ರೂ.ಗಳ ಆರ್ಥಿಕ ಸಹಾಯಧನ ವರ್ಗಾಯಿಸಿದ್ದಾರೆ ಎಂದು ತಿಳಿದುಬಂದಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ರೈತರ ಖಾತೆಗಳಿಗೆ ಸಹಾಯಧನ ವರ್ಗಾಯಿಸಿದ್ದು, 2018-19 ರಿಂದ 2021-22 ರವರೆಗೆ ಭಾರತ ಸರ್ಕರದಿಂದ ಅನುಮೋದಿಸಲ್ಪಟ್ಟ ರೈತ ಕುಟುಂಬಗಳಿಗೆ ಒಟ್ಟು 3864.66 ಕೋಟಿ ರೂ. ರಾಜ್ಯದ ರೈತರಿಗೆ ಪಾವತಿಯಾದಂತಾಗಿರುತ್ತದೆ.

ಈ ಯೋಜನೆಯಡಿ ಎಲ್ಲಾ ಪಾವತಿಗಳನ್ನು ಸಾಧ್ಯವಾದಷ್ಟು ಆಧಾರ್ ಆಧಾರಿತ ಡಿಬಿಟಿ ಮುಖಾಂತರ ಮಾಡಲಾಗಿದೆ. ದೇಶದ ಎಲ್ಲಾ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯವು ಅತಿಹೆಚ್ಚು ಅಂದರೆ 96% ರಷ್ಟು ಆಧಾರ್ ಆಧಾರಿತ ಪಾವತಿಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ ರಾಜ್ಯವಾಗಿದ್ದು, ಕಳೆದ ಬಾರಿ 2020-21 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯದ ಕೃಷಿಇಲಾಖೆಗೆ ಪ್ರಶಸ್ತಿಯು ಲಭಿಸಿದೆ.

2019 ರಿಂದ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಅರ್ಹ ರೈತರಿಗೆ ಹೆಚ್ಚುವರಿಯಾಗಿ 4 ಸಾವಿರ ರೂ.ಗಳ ಆರ್ಥಿಕ ನೆರವನ್ನು ಎರಡು ಕಂತುಗಳಲ್ಲಿ ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿಯೋಜನೆಯಡಿ ನೀಡುತ್ತಿದೆ. ಆಧಾರ್ ಗುರುತಿನ ಸಂಖ್ಯೆಯಾಧಾರದ ಮೇಲೆ ನೇರ ನಗದು ವರ್ಗಾವಣೆ ಪ್ರಕ್ರಿಯೆ ಮೂಲಕ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ.

2021-22 ನೇ ಸಾಲಿನಲ್ಲಿ 50.35 ಲಕ್ಷ ರೈತರಿಗೆ 1975.12 ಕೋಟಿ ರೂ.ಗಳ ಆರ್ಥಿಕ ನೆರವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಶಿವಯೋಗಿ ಕಳಸದ, ಕೃಷಿ ಇಲಾಖೆ ಆಯುಕ್ತ ಶರತ್, ನಿರ್ದೇಶಕಿ ನಂದಿನಿಕುಮಾರಿ, ಜಲಾನಯನ ಇಲಾಖೆ ಆಯುಕ್ತ ಡಾ. ವೆಂಕಟೇಶ್, ನಿರ್ದೇಶಕ ಶ್ರೀನಿವಾಸ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Krishnashastry ಶ್ವೇತವಸ್ತ್ರದ ಸಂತ, ಬೆಳಗೆರೆ ಕೃಷ್ಣಶಾಸ್ತ್ರಿಗಳು.

Krishnashastry ಅದು ನಾನು ಹತ್ತನೇ ತರಗತಿಯನ್ನು ಮುಗಿಸಿ, ಪಿಯುಸಿಯ ಮೆಟ್ಟಿಲೇರುವ ಸಮಯ....

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ವತಿಯಿಂದ “ಬಾಕ್ಸ್ ಕ್ರಿಕೆಟ್ ಪಂದ್ಯಾವಳಿ” ಟ್ರೋಫಿ ಅನಾವರಣ.

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್, ಶಿವಮೊಗ್ಗ ವತಿಯಿಂದ ದಿನಾಂಕ...

Hulikal Ghat ಹುಲಿಕಲ್ ಘಾಟಿಯಲ್ಲಿ ಧರೆ ಕುಸಿತ. ಕಾಮಗಾರಿಯಲ್ಲಿದ್ದ ಮೂವರು ಕಾಣೆ. ಶೋಧಕಾರ್ಯ ಪ್ರಗತಿ.

Hulikal Ghat ಹುಲಿಕಲ್ ಘಾಟಿಯಲ್ಲಿ ರಸ್ತೆ ಕಾಮಗಾರಿ ವೇಳೆ ಅವಘಡ ಸಂಭವಿಸಿದೆ.ಕಾಮಗಾರಿ...

Dr. B.R. Ambedkar ಏಪ್ರಿಲ್ 14. ಡಾ.ಅಂಬೇಡ್ಕರ್ಜನ್ಮ ದಿನಾಚರಣೆಗೆ ಜಿಲ್ಲಾಡಳಿತ‌ದಿಂದ ಸರ್ವಸಿದ್ಧತೆ.

Dr. B.R. Ambedkar ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಸಮಾಜ ಕಲ್ಯಾಣ ಇಲಾಖೆ,...