Wednesday, January 21, 2026
Wednesday, January 21, 2026

ಪ್ರಜಾಸತ್ತಾತ್ಮಕ ಭಾರತ: ನಂಬಿಕಸ್ಥ ಪಾಲುದಾರ- ಮೋದೀಜಿ

Date:

ಜಿ-20 ರಾಷ್ಟ್ರಗಳ ಪೈಕಿ ಭಾರತವೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಅರ್ಥ ವ್ಯವಸ್ಥೆ. ಜೊತೆಗೆ ಜಗತ್ತು ಈಗ ಎದುರು ನೋಡುತ್ತಿರುವ ಅತ್ಯುತ್ತಮ ಮತ್ತು ನಂಬಿಕಸ್ತ ಪಾಲುದಾರನಾಗಲು ಭಾರತಕ್ಕೆ ಸಾಧ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.

ಉತ್ತರ ಪ್ರದೇಶ ರಾಜಧಾನಿ ಲಕ್ನೋದಲ್ಲಿ ನಿನ್ನೆ ಶುಕ್ರವಾರ ಆಯೋಜಿಸಲಾಗಿದ್ದ 3ನೇ ಆವೃತ್ತಿಯ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಅವರು ಮಾತನಾಡಿದರು.

ಇದೇ ಕಾರ್ಯಕ್ರಮದಲ್ಲಿ ಪ್ರಧಾನಿ 80 ಸಾವಿರ ಕೋಟಿ ರೂ. ವೆಚ್ಚದ 1,406 ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಅವುಗಳ ಉದ್ಘಾಟನೆಯನ್ನೂ ನೆರವೇರಿಸಿದ್ದಾರೆ. ಕೃಷಿ, ಮಾಹಿತಿ ತಂತ್ರಜ್ಞಾನ ಹಾಗೂ ಎಲೆಕ್ಟ್ರಾನಿಕ್ಸ್‌, ಮಧ್ಯಮ, ಸಣ್ಣ ಮತ್ತು ಅತೀ ಸಣ್ಣ ಉದ್ದಿಮೆ ಕ್ಷೇತ್ರ, ಉತ್ಪಾದನೆ, ನವೀಕೃತ ಇಂಧನ, ಔಷಧೋದ್ಯಮ, ಪ್ರವಾಸೋದ್ಯಮ, ರಕ್ಷಣೆ ಹಾಗೂ ವಾಯುಯಾನ, ಜವುಳಿ ಮತ್ತು ಕೈಮಗ್ಗ ಕ್ಷೇತ್ರಕ್ಕೆ ಸಂಬಂಧಿಸಿದ ಉದ್ದಿಮೆಗಳು ಉದ್ಘಾಟನೆಗೊಂಡ ಯೋಜನೆಗಳಲ್ಲಿ ಸೇರಿವೆ.

ಜಗತ್ತಿನಲ್ಲಿ ಸದ್ಯ ಉಂಟಾಗಿರುವ ಬೆಳವಣಿಗೆಗಳು ನಮ್ಮ ದೇಶಕ್ಕೆ ಪ್ರಧಾನ ಭೂಮಿಕೆ ನಿರ್ವಹಿಸುವ ಅವಕಾಶ ತಂದುಕೊಟ್ಟಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾಸತ್ತಾತ್ಮಕವಾಗಿರುವ ನಮ್ಮ ಭಾರತಕ್ಕೆ ಮಾತ್ರ ಸದ್ಯ ಜಗತ್ತು ಎದುರು ನೋಡುತ್ತಿರುವ ನಂಬಿಕಸ್ತ ಪಾಲುದಾರ ನಾಗಲು ಸಾಧ್ಯ. ಏಕೆಂದರೆ ನಮಗೆ ಆ ರೀತಿಯ ಸಾಮರ್ಥ್ಯ ಮತ್ತು ಶಕ್ತಿ ಇದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಶಿವಮೊಗ್ಗ :ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ಕಛೇರಿಯಲ್ಲಿ...

S.N.Chennabasappa ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ ವಚನ ಅಳವಡಿಸಿಕೊಳ್ಳಬೇಕು –ಎಸ್.ಎನ್. ಚನ್ನಬಸಪ್ಪ

S.N.Chennabasappa ಪ್ರತಿಯೊಬ್ಬ ವ್ಯಕ್ತಿ ತನ್ನ ಜೀವನದಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ...

Klive Special Article ದಾಖಲೆ ನಿರ್ಮಿಸಿದ ವೀಣೆಯ ಝೇಂಕಾರ

Klive Special Article ಶಿವಮೊಗ್ಗ ನಿಜವಾಗಿಯೂ ಸಾಂಸ್ಕೃತಿಕವಾಗಿ ಶ್ರೀಮಂತವಾದ ಊರು....

ಜ.24 ರಿಂದ ಮಲೆನಾಡು ಕರಕುಶಲ ಉತ್ಸವ – ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಹೇಮಂತ್ ಎನ್.

ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ...