Friday, April 10, 2026
Friday, April 10, 2026

ಕಾಶ್ಮೀರದಲ್ಲಿ ಮುಜಾಹಿದ್ದೀನ್ ಮುಖಂಡ ಉಡೀಸ್

Date:

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ರಾತ್ರಿ ನಡೆದ ಎನ್ಕೌಂಟರ್ ನಲ್ಲಿ ಸ್ವಯಂ ಘೋಷಿತ ಹಿಜ್ಬುಲ್ ಮುಜಾಹಿದ್ದೀನ್ ಮುಖಂಡನನ್ನು ಕೊಲ್ಲಲಾಗಿದೆ. 3 ಸಿಬ್ಬಂದಿ ಮತ್ತು ಒಬ್ಬ ನಾಗರಿಕ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ.

ಈ ವಿಷಯದ ಕುರಿತು ಟ್ವೀಟ್ ಮಾಡಿರುವ ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್, ನಿಷೇಧಿತ ಉಗ್ರ ಸಂಘಟನೆಯ ಭಯೋತ್ಪಾದಕ ಕಮಾಂಡರ್ ಎಚ್.ಎಂ.ನಿಸಾರ್ ಖಾಂಡೆ ಅವರನ್ನು ಹತ್ಯೆ ಮಾಡಲಾಗಿದೆ. 01 ಎಕೆ 47 ರೈಫಲ್ ಸೇರಿದಂತೆ ಹಲವು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪೊಲೀಸ್ ವಕ್ತಾರರ ಪ್ರಕಾರ, ಅನಂತನಾಗ್ ರಿಷಿಪೋರಾ ಪ್ರದೇಶದಲ್ಲಿ ನಿನ್ನೆ ಶುಕ್ರವಾರ ಸಂಜೆ ಎನ್ಕೌಂಟರ್ ಆರಂಭವಾಯಿತು. ಬಂಡುಕೋರರೊಂದಿಗಿನ ಆರಂಭಿಕ ಗುಂಡಿನ ಚಕಮಕಿಯಲ್ಲಿ 3ಜನ ಸೈನಿಕರು ಮತ್ತು ಒಬ್ಬ ನಾಗರಿಕ ಗಾಯಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಎಲ್ಲಾ ಗಾಯಾಳುಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ಶ್ರೀನಗರದ 92 ಬೇಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವಕ್ತಾರರು ಪಿಟಿಐಗೆ ನೀಡಿದ ವರದಿಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Krishnashastry ಶ್ವೇತವಸ್ತ್ರದ ಸಂತ, ಬೆಳಗೆರೆ ಕೃಷ್ಣಶಾಸ್ತ್ರಿಗಳು.

ಲೇ: ಪ್ರಸಾದ್ ಶ್ರೀವತ್ಸ.ದಾವಣಗೆರೆ. Krishnashastry ಅದು ನಾನು ಹತ್ತನೇ ತರಗತಿಯನ್ನು ಮುಗಿಸಿ, ಪಿಯುಸಿಯ...

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ವತಿಯಿಂದ “ಬಾಕ್ಸ್ ಕ್ರಿಕೆಟ್ ಪಂದ್ಯಾವಳಿ” ಟ್ರೋಫಿ ಅನಾವರಣ.

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್, ಶಿವಮೊಗ್ಗ ವತಿಯಿಂದ ದಿನಾಂಕ...

Hulikal Ghat ಹುಲಿಕಲ್ ಘಾಟಿಯಲ್ಲಿ ಧರೆ ಕುಸಿತ. ಕಾಮಗಾರಿಯಲ್ಲಿದ್ದ ಮೂವರು ಕಾಣೆ. ಶೋಧಕಾರ್ಯ ಪ್ರಗತಿ.

Hulikal Ghat ಹುಲಿಕಲ್ ಘಾಟಿಯಲ್ಲಿ ರಸ್ತೆ ಕಾಮಗಾರಿ ವೇಳೆ ಅವಘಡ ಸಂಭವಿಸಿದೆ.ಕಾಮಗಾರಿ...