Thursday, September 17, 2026
Thursday, September 17, 2026

ಜಿಲ್ಲೆಯಲ್ಲಿ ಎನ್ಎಫ್ಎಸ್ ಎ & ಗರೀಬ್ ಕಲ್ಯಾಣ್ ಯೋಜನೆ ಪಡಿತರ ವಿತರಣೆ

Date:

ಶಿವಮೊಗ್ಗದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಎನ್.ಎಫ್.ಎಸ್.ಎ. ಮತ್ತು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಜೂನ್ 2022ರ ಮಾಹೆಗೆ ಬಿಡುಗಡೆಯಾದ ಪಡಿತರಧಾನ್ಯವನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಿ ಬಿಡುಗಡೆ ಮಾಡಿದೆ.

ಅಂತ್ಯೋದಯ ಪಡಿತರ ಚೀಟಿದಾರರ ಕುಟುಂಬಕ್ಕೆ ಎನ್‍ಎಫ್‍ಎಸ್‍ಎ ಯೋಜನೆಯಡಿ ಪ್ರತಿ ಕುಟುಂಬಕ್ಕೆ 35 ಕೆ.ಜಿ. ಅಕ್ಕಿ ಹಾಗೂ ಕುಟುಂಬದ ಪ್ರತಿ ಸದಸ್ಯರಿಗೆ ಪಿಎಂಜಿಕೆಎವೈ ಯೋಜನೆಯಡಿ 5 ಕೆ.ಜಿ. ಅಕ್ಕಿ ಹಂಚಿಕೆ ನೀಡಲಾಗಿದೆ. ಆದ್ಯತಾ ಕುಟುಂಬ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ ಎನ್‍ಎಫ್‍ಎಸ್‍ಎ ಹಂಚಿಕೆ 5 ಕೆ.ಜಿ.ಅಕ್ಕಿ ಮತ್ತು ಪಿಎಂಜಿಕೆಎವೈ ಯೋಜನೆಯಡಿ ಕುಟುಂಬದ ಪ್ರತಿ ಸದಸ್ಯರಿಗೆ 5 ಕೆ.ಜಿ.ಅಕ್ಕಿ ಉಚಿತವಾಗಿ ನೀಡಲಾಗುತ್ತದೆ. ಆದ್ಯತೇತರ ಪಡಿತರ ಚೀಟಿದಾರರಿಗೆ ಏಕ ಸದಸ್ಯರಿಗೆ ರೂ. 15 ರೂ. ದರದಲ್ಲಿ ಏಕ ಸದಸ್ಯರಿಗೆ 5 ಕೆ.ಜಿ., 2 ಹಾಗೂ ಹೆಚ್ಚಿನ ಸದಸ್ಯರಿರುವ ಪಡಿತರ ಚೀಟಿಗೆ 10 ಕೆ.ಜಿ. ಅಕ್ಕಿಯನ್ನು ವಿತರಿಸಲಾಗುತ್ತದೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತಿ ಮಾಹೆಯ 1ನೇ ತಾರೀಖಿನಿಂದ ಬೆಳಗ್ಗೆ 7 ರಿಂದ ರಾತ್ರಿ 9 ಗಂಟೆವರೆಗೆ ಊಟದ ಸಮಯ ಹೊರತುಪಡಿಸಿ ತಿಂಗಳ ಅಂತ್ಯದವರೆಗೆ ಪಡಿತರ ವಿತರಿಸಲಾಗುತ್ತದೆ. ಪಡಿತರ ಚೀಟಿದಾರರು ಆಧಾರ್ ಆಧಾರಿತ ಬಯೋ ಮೆಟ್ರಿಕ್ ಅಥವಾ ಓಟಿಪಿ ನೀಡಿ ಪಡಿತರ ಪಡೆಯುವುದು. ಅಂತ್ಯೋದಯ/ಬಿಪಿಎಲ್ ಪಡಿತರ ಚೀಟಿಗಳಿಗೆ ಆಹಾರ ಧಾನ್ಯ ಸಂಪೂರ್ಣ ಉಚಿತವಾಗಿದೆ. ಬಯೋ ಪಡೆಯಲು ಯಾವುದೇ ಶುಲ್ಕ ಇರುವುದಿಲ್ಲ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...