ಕಳೆದ ಒಂದು ವಾರದಿಂದ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.ಕೊರೋನಾ ಸೋಂಕು ಹರಡದಂತೆ ತೀವ್ರ ನಿಗಾ ವಹಿಸಲು ಕರ್ನಾಟಕ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆಯನ್ನು ನೀಡಿದೆ.
ಸೋಂಕು ಹರಡದಂತೆ ಸಂಬಂಧಪಟ್ಟ ರಾಜ್ಯಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಮುಂಬೈ ಉಪನಗರ ಸೇರಿದಂತೆ ಮಹಾರಾಷ್ಟ್ರದ 6 ಜಿಲ್ಲೆಗಳಲ್ಲಿ ಸೋಂಕು ಗಣನೀಯವಾಗಿ ಏರಿಕೆಯಾಗಿದೆ. ಮೇ 27ರಿಂದ ಜೂನ್ 2ರ ಅವಧಿಯಲ್ಲಿ 2,330 ಹೊಸ ಪ್ರಕರಣಗಳು ವರದಿಯಾಗಿದೆ.
ಮುಂಬೈ, ಠಾಣೆ, ರಾಯಗಡದಲ್ಲಿ ಕಳೆದ ವಾರಕ್ಕೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ದುಪ್ಪಟ್ಟು ಏರಿಕೆಯಾಗಿದೆ.
ಬೆಂಗಳೂರು ನಗರದಲ್ಲಿ ವಾರದಲ್ಲಿ 1,063 ಪ್ರಕರಣಗಳು ವರದಿಯಾಗಿದೆ. ಪಾಸಿಟಿವಿಟಿ ದರ ಶೇ 1.84ರಷ್ಟಿದೆ. ಚೆನ್ನೈ, ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ 3ರಷ್ಟಿದೆ. ಕೇರಳದಲ್ಲೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ವಾರದಲ್ಲಿ 6,556 ಪ್ರಕರಣ ವರದಿಯಾಗಿದೆ.
ಕೊರೋನಾ ಪರೀಕ್ಷೆ, ಲಸಿಕೆ ಸೇರಿದಂತೆ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿ ಅನುಸರಿಬೇಕು ಎಂದು ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ.
