ರೈತ ಸಹಕಾರಿ ಸಂಘಗಳ ಮೂಲಕ ಕಳೆದ ವರ್ಷ 21 ಲಕ್ಷ ರೈತರಿಗೆ ಸಾಲ ನೀಡಲಾಗಿತ್ತು. ಈ ಸಲ 31 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡಲಾಗುತ್ತದೆ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಹೊಸದುರ್ಗ ತಾಲ್ಲೂಕಿನ ಇಂಡೇದೇವರಹಟ್ಟಿಯಲ್ಲಿ ಆಯೋಜಿಸಲಾಗಿತ್ತು. ತಾಲ್ಲೂಕಿನ ವಾಣಿವಿಲಾಸ ಸಾಗರದ ಹಿನ್ನೀರಿನಲ್ಲಿ ಬೇವಿನಹಳ್ಳಿ ಗ್ರಾಮದಿಂದ ಹುಣಸೇಕಟ್ಟೆ ಗ್ರಾಮದವರೆಗೆ ಸೇತುವೆ ರಸ್ತೆ ನಿರ್ಮಾಣ ಕಾಮಗಾರಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ತುಮಕೂರು ಶಾಖಾ ಕಾಲುವೆಯ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕಿನ ಕಸಬಾ, ಮಾಡದ ಕೆರೆ ಮತ್ತು ಶ್ರೀರಾಂಪುರ ಹೋಬಳಿಗಳ ವ್ಯಾಪ್ತಿಯಲ್ಲಿನ 36,916 ಹೆ ಪ್ರದೇಶಕ್ಕೆ ಹನಿ ನೀರಾವರಿ ಒದಗಿಸುವುದು. 85 ಕೆರೆಗಳನ್ನು ತುಂಬಿಸುವ ಕಾಮಗಾರಿ. ಹಾಗೂ ತಾಲ್ಲೂಕಿನ ವಿವಿಧ ಇಲಾಖೆಯ ಕಾಮಗಾರಿಗಳ ಉದ್ಘಾಟನೆ ಶಂಕುಸ್ಥಾಪನೆ ಮತ್ತು ಸವಲತ್ತು ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ, ಸರ್ಕಾರ ರೈತ ಮಕ್ಕಳಿಗೆ ಅನುಕೂಲವಾಗಲಿ ಎಂದು ವಿದ್ಯಾನಿಧಿ ಯೋಜನೆ ಜಾರಿಗೆ ತಂದಿದೆ. 14 ಲಕ್ಷ ರೈತ ಮಕ್ಕಳಿಗೆ ವಿದ್ಯಾನಿಧಿ ಉಪಯೋಗ ದೊರಕಲಿದೆ. ಈ ಯೋಜನೆಗಾಗಿ ವಿದ್ಯಾರ್ಥಿಗಳು ಯಾವುದೇ ಅರ್ಜಿ ಹಾಕುವಂತಿಲ್ಲ. ನೇರ ಅವರ ಖಾತೆಗೆ ಹಣ ಜಮಾ ಆಗಲಿದೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಮನವಿಯಂತೆ ರೈತರು ಬಳಸುವ ಯಂತ್ರೋಪಕರಣಗಳಿಗೆ ಡೀಸಲ್ ಸಬ್ಸಿಡಿ ನೀಡಲು ಯೋಜನೆ ರೂಪಿಸಲಾಗಿದೆ. ಈ ಯೋಜನೆ ಅಂಗವಾಗಿ ವಾರ್ಷಿಕವಾಗಿ 1,250 ರೂಪಾಯಿಗಳನ್ನು ರೈತರ ಖಾತೆಗೆ ಜಮೆ ಮಾಡಲಾಗುತ್ತದೆ. ಇದಕ್ಕಾಗಿ 600 ಕೋಟಿ ರೂಪಾಯ ಮಂಜೂರು ಮಾಡಲಾಗಿದೆ. ಸದಾ ರೈತರ ಬಗ್ಗೆ ಕಾಳಜಿ ಇರುವ ಸರ್ಕಾರ ನಮ್ಮದು. ಹಲವಾರು ಯೋಜನೆಗಳನ್ನು ರೈತರಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.