ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಣ್ಣು ಉಳಿಸಿ ಆಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ವಿಶ್ವ ಪರಿಸರ ದಿನದಂದು ಇಡೀ ವಿಶ್ವದ ಜನರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಇಂದು ದೇಶ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಈ ಅಮೃತ ಕಾಲದಲ್ಲಿ ಹೊಸ ಸಂಕಲ್ಪಗಳನ್ನು ಕೈಗೊಳ್ಳುತ್ತಿದೆ. ಆದ್ದರಿಂದ, ಈ ರೀತಿಯ ಸಾರ್ವಜನಿಕ ಅಭಿಯಾನ ಬಹಳ ಮುಖ್ಯವಾಗುತ್ತದೆ. ಕಳೆದ 8 ವರ್ಷಗಳಿಂದ ದೇಶದಲ್ಲಿ ನಡೆಯುತ್ತಿರುವ ಎಲ್ಲಾ ಯೋಜನೆಗಳು ಒಂದಲ್ಲ ಒಂದು ರೀತಿಯಲ್ಲಿ ಪರಿಸರವನ್ನು ಸಂರಕ್ಷಿಸುವ ಹಂಬಲವನ್ನು ಹೊಂದಿವೆ ಎಂಬ ತೃಪ್ತಿ ನನಗಿದೆ ಎಂದು ತಿಳಿಸಿದ್ದಾರೆ.
ಸ್ವಚ್ಛ ಭಾರತ್ ಮಿಷನ್, ತ್ಯಾಜ್ಯವನ್ನು ಸಂಪತ್ತಾಗಿಸುವ ಕಾರ್ಯಕ್ರಮಗಳು, ಅಮೃತ್ ಮಿಷನ್ ಅಡಿ ನಗರಗಳಲ್ಲಿ ಆಧುನಿಕ ಒಳಚರಂಡಿ ಸಂಸ್ಕರಣಾ ಘಟಕಗಳ ನಿರ್ಮಾಣ, ಸಿಂಗಲ್ ಯೂಸ್ ಪ್ಲಾಸ್ಟಿಕ್‌ಗಳನ್ನು ಬಳಸಿ ಪರಿಸರವನ್ನು ರಕ್ಷಿಸುವ ಭಾರತದ ಬಹು ಆಯಾಮಗಳಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.