ರಾಜ್ಯದಲ್ಲಿ ಕಳೆದ ಮೂರು, ನಾಲ್ಕು ದಿನಗಳಿಂದ ಅಬ್ಬರಿಸುತ್ತಿರುವ ಮಳೆರಾಯನ ಆರ್ಭಟ ಮುಂದಿನ 5 ದಿನಗಳವರೆಗೆ ಮುಂದುವರೆಯುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.
ಮುಂಗಾರು ಮಳೆ ಪೂರ್ಣ ಪ್ರಮಾಣದಲ್ಲಿ ರಾಜ್ಯದಾದ್ಯಂತ ಆವರಿಸುವ ಸಾಧ್ಯತೆಗಳಿವೆ ಎಂದು ತಿಳಿಸಿದೆ.
ಇಂದು ಸಂಜೆ ಚಿಕ್ಕಮಗಳೂರು , ಹಾಸನ , ಕೊಡಗು , ಚಾಮರಾಜನಗರ , ಬೆಂಗಳೂರು , ಬೆಂಗಳೂರು ಗ್ರಾಮಾಂತರ , ಮಂಡ್ಯ , ರಾಮನಗರ , ತುಮಕೂರು , ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಭಾರಿ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಎಲ್ಲಾ ಜಿಲ್ಲೆಗಳಲ್ಲೂ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ 4 ದಿನ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು , ಮಿಂಚು ಸಹಿತ ಮಳೆಯಾಗಲಿದೆ.