ಉತ್ತರಾಖಂಡ ಮುಖ್ಯಮಂತ್ರಿ, ಬಿಜೆಪಿಯ ಪುಷ್ಕರ್ ಸಿಂಗ್ ಧಾಮಿ ಅವರು ನಿರ್ಣಾಯಕ ಉಪ ಚುನಾವಣೆಯಲ್ಲಿ ಗೆಲುವು ಕಂಡಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಪುಷ್ಕರ್ ಸಿಂಗ್ ಪರಾಭವಗೊಂಡಿದ್ದರಿಂದ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಉಪ ಚುನಾವಣೆಯ ಗೆಲುವು ಅಗತ್ಯವಾಗಿತ್ತು. ಚಂಪಾವತ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು 55,025 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.
ಕೆಲ ತಿಂಗಳ ಹಿಂದೆ ನಡೆದ ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಗೆಲ್ಲಿಸಿ, ಸೋಲು ಕಂಡಿದ್ದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಚಂಪಾವತ್ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ.
ಈ ಹಿನ್ನೆಲೆಯಲ್ಲಿ ಪುನಃ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ.
ಧಾಮಿ ಅವರು, ಎದುರಾಳಿಯಾದ ಕಾಂಗ್ರೆಸ್ ಅಭ್ಯರ್ಥಿ ನಿರ್ಮಲಾ ಗೆಹ್ತೊರ್, ಸಮಾಜವಾದಿ ಪಕ್ಷದ ಮನೋಜ್ ಕುಮಾರ್ ಭಟ್ ಹಾಗೂ ಸ್ವತಂತ್ರ ಅಭ್ಯರ್ಥಿ ಹಿಮಾಂಶು ಗಡ್ಕೊಟಿ ಅವರನ್ನು ಸೋಲಿಸಿದ್ದಾರೆ.
ಚಂಪಾವತ್ ಕ್ಷೇತ್ರದ ಬಿಜೆಪಿ ಶಾಸಕ ಕೈಲಾಶ್ ಗೆಹ್ತೋರಿ ಅವರು ರಾಜೀನಾಮೆ ನೀಡುವ ಮೂಲಕ ತಮ್ಮ ಸ್ಥಾನ ತ್ಯಾಗ ಮಾಡಿ, ಪುಷ್ಕರ್ ಸಿಂಗ್ ಧಾಮಿ ಅವರಿಗೆ ಅನುವು ಮಾಡಿಕೊಟ್ಟಿದ್ದರು.
ಕುತೂಹಲದ ವಿಷಯ ಎಂದರೆ ಕಾಂಗ್ರೆಸ್ ಅಭ್ಯರ್ಥಿ ನಿರ್ಮಲಾ ಠೇವಣಿ ಸಹ ಕಳೆದುಕೊಂಡಿದ್ದಾರೆಂದು ತಿಳಿದು ಬಂದಿದೆ.
ಮೇ 31ರಂದು ನಡೆದಿದ್ದ ಚುನಾವಣೆಯಲ್ಲಿ ಧಾಮಿ ಅವರು ಎದುರಾಳಿ ಕಾಂಗ್ರೆಸ್ನ ನಿರ್ಮಲಾ ವಿರುದ್ಧ 54 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದಾರೆ. ಉಪಚುನಾವಣೆಯಲ್ಲಿ ಒಟ್ಟು 61,771 ಮತಗಳು ಚಲಾವಣೆಯಾಗಿದ್ದವು. 13ನೇ ಸುತ್ತಿನವರೆಗೆ 61 ಸಾವಿರಕ್ಕೂ ಹೆಚ್ಚು ಮತಗಳ ಎಣಿಕೆ ನಡೆದಿದೆ.