Wednesday, August 26, 2026
Wednesday, August 26, 2026

ಖಾರಿಫ್ ಬೆಳೆಗಳಿಗೆ ಬೆಂಬಲ ಬೆಲೆ ಏರಿಕೆ

Date:

ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಏರಿಕೆಗೆ ಕೇಂದ್ರದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಮುಂಗಾರು ಮಾರುಕಟ್ಟೆ ಋತುವಿನಲ್ಲಿ ಬೆಳೆಗಳ ಬೆಂಬಲ ಬೆಲೆ ಏರಿಕೆ ಮಾಡಲಾಗಿದೆ. ಬೆಳೆಗಳ ಉತ್ಪಾದನಾ ವೆಚ್ಚದ 1.5ರಷ್ಟು ಬೆಂಬಲ ಬೆಲೆ ನಿಗದಿ ಮಾಡಲಾಗಿದೆ.

ಬೆಳೆಯ ಬೆಂಬಲ ಬೆಲೆ ಕ್ವಿಂಟಲ್​ಗೆ 480 ರೂಪಾಯಿ, ಎಳ್ಳು ಬೆಂಬಲ ಬೆಲೆ ಕ್ವಿಂಟಲ್​ಗೆ 523 ರೂಪಾಯಿ, ಸೂರ್ಯಕಾಂತಿ ಬೀಜದ ಬೆಂಬಲ ಬೆಲೆ ಕ್ವಿಂಟಲ್​ಗೆ 385 ರೂಪಾಯಿ, ‌ಸೋಯಾಬಿನ್ ಬೆಂಬಲ ಬೆಲೆ ಕ್ವಿಂಟಲ್​ಗೆ 350 ರೂಪಾಯಿ ಹೆಚ್ಚಳ ಮಾಡುವುದಕ್ಕೆ ನಿರ್ಧರಿಸಲಾಗಿದೆ.

ಅದೇ ರೀತಿ, ತೊಗರಿ ಮೇಲಿನ ಬೆಂಬಲ ಬೆಲೆ ಕ್ವಿಂಟಲ್​ಗೆ 300 ರೂಪಾಯಿ, ಹೆಸರುಕಾಳು ಮೇಲಿನ ಬೆಂಬಲ ಬೆಲೆ ಕ್ವಿಂಟಲ್​ಗೆ 300 ರೂಪಾಯಿ, ರಾಗಿ ಬೆಂಬಲ ಬೆಲೆ ಕ್ವಿಂಟಲ್​ಗೆ 201 ರೂಪಾಯಿ ಏರಿಕೆ ಮಾಡಲಾಗಿದೆ ಎಂದು ಕೇಂದ್ರ ವಾರ್ತಾ, ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಕೇಂದ್ರ ಸಂಪುಟ ಸಭೆಯ ನಂತರ ಹೇಳಿಕೆ ನೀಡಿದ್ದಾರೆ‌.

ವರದಿಗಳ ಪ್ರಕಾರ, 2022-23ರ ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಶೇ.5ರಿಂದ 20ರಷ್ಟು ಹೆಚ್ಚಾಗಬಹುದು.

ಸಂಪುಟದ ನಿರ್ಧಾರದ ನಂತರ ಖಾರಿಫ್ ಬೆಳೆಗಳ, ಅಂದರೆ ಭತ್ತ ಮತ್ತು ಸೋಯಾಬೀನ್‌ನ ಎಂಎಸ್‌ಪಿಯಲ್ಲಿ ಹೆಚ್ಚಳವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ ಮೆಕ್ಕೆಜೋಳದ ಎಂಎಸ್‌ಪಿ ಹೆಚ್ಚಿಸುವ ಪ್ರಸ್ತಾವನೆಗೂ ಸಂಪುಟ ಅನುಮೋದನೆ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa “ಮನರಂಜನೆ” ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...