ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ರಾಜ್ಯದ ಮೊದಲ ಭಾರತ್ ಗೌರವ್ ರೈಲು ಬೆಂಗಳೂರು, ಕಾಶಿ ನಡುವೆ ರೈಲು ಸಂಚಾರ ಆರಂಭವಾಗಲಿದೆ.
ಧಾರ್ಮಿಕ ದತ್ತಿ ಇಲಾಖೆ ಮಾಲಿಕತ್ವದಲ್ಲಿ ಸಂಚರಿಸಲಿದೆ. ಯಾತ್ರಾರ್ಥಿಗಳು ಕಡಿಮೆ ಖರ್ಚಿನಲ್ಲಿ ಕಾಶಿಯಾತ್ರೆ ಕೈಗೊಳ್ಳಬಹುದಾಗಿದೆ. ವಿಶೇಷ ಎಂದರೆ ಈ ಯಾತ್ರೆಗೆ ರಾಜ್ಯ ಸರಕಾರ ಯಾತ್ರಾರ್ಥಿಗಳಿಗೆ ಬಜೆಟ್‌ನಲ್ಲಿ ತಲಾ .5 ಸಾವಿರ ಸಹಾಯಧನ ನೀಡುವ ಯೋಜನೆಯನ್ನು ಘೋಷಿಸಿದೆ.
ಕೇಂದ್ರ ಸರ್ಕಾರದ ಭಾರತ್ ಗೌರವ್ ರೈಲು ಯೋಜನೆಯನ್ನು ಬಳಸಿಕೊಂಡು ಧಾರ್ಮಿಕ ದತ್ತಿ ಇಲಾಖೆ ಕಾಶಿಯಾತ್ರೆ ಯೋಜನೆ ಅನುಷ್ಠಾನಕ್ಕೆ ನಿರ್ಧರಿಸಿದೆ. ಇದಕ್ಕಾಗಿ ಕಳೆದ ವಾರ ನೈಋುತ್ಯ ರೈಲ್ವೆಯಲ್ಲಿ ನೋಂದಣಿ ಮಾಡಿಕೊಂಡಿತ್ತು. ಸದ್ಯ 2 ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ನಡೆಸಿ ರೈಲು ಬೋಗಿಗಳು, ಆಂತರಿಕ ಸೌಲಭ್ಯಗಳು, ವೇಳಾಪಟ್ಟಿ, ಮಾರ್ಗ, ಓಡಾಟ ವೆಚ್ಚದ ಕುರಿತು ಚರ್ಚಿಸಿದ್ದು ಯೋಜನೆ ಮೊದಲ ಪ್ರವಾಸವನ್ನು ಆಗಸ್ಟ್ ಮೊದಲ ವಾರ ಕೈಗೊಳ್ಳಲು ನಿರ್ಧರಿಸಲಾಗಿದೆ.
7 ದಿನಗಳ ಪ್ರವಾಸ ಇದಾಗಿದೆ. ಕಾಶಿ, ಅಯೋಧ್ಯೆ ಮತ್ತು ಪ್ರಯಾಗ ಧಾರ್ಮಿಕ ಸ್ಥಳಗಳ ದರ್ಶನ ಒಳಗೊಂಡಿದೆ. ರೈಲ್ವೆ ನಿಲ್ದಾಣ ನಂತರ ಯಾತ್ರಿ ಸ್ಥಳಗಳಲ್ಲಿ ಆಹಾರ, ವಸತಿ ಮತ್ತು ಸ್ಥಳೀಯ ಸಾರಿಗೆ ಅಗತ್ಯಗಳನ್ನು ಐಆರ್‌ಸಿಟಿಸಿ ನೋಡಿಕೊಳ್ಳಲಿದೆ. ಕಾಶಿಯಾತ್ರೆ ಯೋಜನೆ ಅರ್ಹ ಫಲಾನುಭವಿಗಳು ಹಾಗೂ ಇತರೆ ಯಾತ್ರಿಗಳ ನೋಂದಣಿ ಪ್ರಕ್ರಿಯೆ ಧಾರ್ಮಿಕ ದತ್ತಿ ಇಲಾಖೆ ಶೀಘ್ರದಲ್ಲಿಯೇ ಆರಂಭಿಸುವ ಸಾಧ್ಯತೆಗಳಿವೆ. ದೇಗುಲ ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತು ಪ್ರಧಾನಿ ಮೋದಿಯವರ ದಿವ್ಯ ಕಾಶಿ, ಭವ್ಯ ಕಾಶಿ ಅಭಿಯಾನವನ್ನು ಉತ್ತೇಜಿಸಲು ಕರ್ನಾಟಕದ ಜನರಿಗೆ ಈ ವಿಶೇಷ ರೈಲು ಸೇವೆಯನ್ನು ಪ್ರಾರಂಭಿಸಲಾಗುತ್ತಿದೆ.