ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ವಾರ್ಷಿಕ 6 ಸಾವಿರ ರೂ.ಗಳ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ಮೂಲಕ ವರ್ಗಾವಣೆ ನೀಡಲಾಗುತ್ತಿದೆ.
ಈಗಾಗಲೇ ಈ ಸೌಲಭ್ಯವನ್ನು ಪಡೆದಿರುವ ರೈತರು ಮುಂದಿನ ಬಾರಿ ಆರ್ಥಿಕ ನೆರವು ಪಡೆಯಬೇಕಾದರೆ ಇ-ಕೆವೈಸಿ ಮಾಡಿಸುವುದನ್ನು ಮರೆಯಬಾರದು.
ಪ್ರತಿವರ್ಷವೂ ಫಲಾನುಭವಿ ರೈತರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಆದ್ದರಿಂದ ಮುಂದಿನ ಸೌಲಭ್ಯ ಪಡೆಯಬೇಕಾದರೆ ಜುಲೈ 31ರೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಸರ್ಕಾರದ ಸೌಲಭ್ಯಗಳು ದುರುಪಯೋಗವಾಗುವ ಸಾಧ್ಯತೆ ಹೆಚ್ಚಿದೆ.
ಆದ್ದರಿಂದ ಮುಂದಿನ ದಿನಗಳಲ್ಲಿ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಆರ್ಥಿಕ ನೆರವು ವರ್ಗಾವಣೆಯಾಗಬೇಕಾದರೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.
ಈಗಾಗಲೇ ರಾಜ್ಯದಲ್ಲಿ ಇದುವರೆಗೆ ಶೇ.16 ರಷ್ಟು ರೈತರು ಮಾತ್ರ ಇ – ಕೆವೈಸಿ ಮಾಡಿಸಿದ್ದು, ಶೇ.84 ರಷ್ಟು ರೈತರು ಇದನ್ನು ಮಾಡಿಸಿರುವುದಿಲ್ಲ. ಆದ್ದರಿಂದ ಪ್ರತಿಯೊಬ್ಬ ರೈತರೂ ಇದನ್ನು ಮಾಡಿಸುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಮಾಡಿಸದ ರೈತರು ಜುಲೈ 31 ರೊಳಗೆ ಓಟಿಪಿ ಆಧಾರಿತ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಮಾಡಿಸುವಂತೆ ಕೃಷಿ ಆಯುಕ್ತರು ತಿಳಿಸಿದ್ದಾರೆ.