Saturday, April 11, 2026
Saturday, April 11, 2026

ದೇಶದಲ್ಲಿ ಕೋವಿಡ್ ಸೋಂಕು ಹೆಚ್ಚಳ ಕಾಣುತ್ತಿದೆ

Date:

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈಗ 7000ಕ್ಕೂ ಅಧಿಕ ಕೇಸ್ ಗಳು ದಾಖಲಾಗಿವೆ. ಕಳೆದ 24 ಗಂಟೆಯಲ್ಲಿ 7,584 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ನಿನ್ನೆ 15,31,510 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,947,642,992 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 3,35,050 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

ಸೋಂಕಿತರ ಸಾವಿನ ಸಂಖ್ಯೆ ಮತ್ತೆ ಏರಿಕೆಯಾಗಿದ್ದು ಒಂದೇ ದಿನದಲ್ಲಿ 24 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,747ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.

ಇನ್ನು ದೇಶದಲ್ಲಿ 36,267 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 3,791 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,26,44,092 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಾಸಕರಿಗೆ ನೀಡುವ ಅನುದಾನದಲ್ಲಿ ಪ್ರತೀ ವರ್ಷ ₹10 ಲಕ್ಷ ವಿಶೇಷಚೇತನರ ಅಭಿವೃದ್ಧಿಗೆ ನೀಡುವೆ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ವಿಶೇಷಚೇತನರ ಸಾಧನೆಗಳು ಕೂಡ ವಿಶೇಷವಾಗಿದ್ದು, ಅವರ ಸಾಧನೆಗಳನ್ನು ಉತ್ತೇಜಿಸಿ,...

DC shivamogga ಹುಲಿಕಲ್ ಘಾಟಿ ಮಣ್ಣಿನ ಕುಸಿತ. ಮೃತ ಕಾರ್ಮಿಕರ ಕುಟುಂಬಗಳಿಗೆ ಡೀಸಿ ಪ್ರಭುಲಿಂಗ ಕವಳಿಕಟ್ಟಿ ಸಾಂತ್ವನ

DC shivamogga ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಲಿಕಲ್ ಬಾಳೆಬರೆ...

Mescom ಏಪ್ರಿಲ್ 12. ಶಿವಮೊಗ್ಗದ ವಿನಾಯಕ ನಗರ, ರವೀಂದ್ರ ನಗರ‌ ಸುತ್ತಮುತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

Mescom ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ...