Thursday, August 13, 2026
Thursday, August 13, 2026

ತಿರುಪತಿ ತಿಮ್ಮಪ್ಪನ ಆಶೀರ್ವಾದ ಪಡೆದ ನಯನ-ವಿಘ್ನೇಶ್ ಜೋಡಿ

Date:

ನಿನ್ನೆಯಷ್ಟೇ ಅದ್ಧೂರಿಯಾಗಿ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ಲೇಡಿ ಸೂಪರ್ ಸ್ಟಾರ್ ನಯನತಾರಾ ಸಪ್ತಪದಿ ತುಳಿದಿದ್ದಾರೆ.

ಮದುವೆಯ ನಂತರ ತಾವು ಆರಾಧಿಸುವ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗಿದ್ದರು. ಅಲ್ಲಿ ನಯನತಾರಾ ಎಡವಟ್ಟು ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಹೀಗಾಗಿ ಸೋಷಿಯಲ್ ಮೀಡಿಯಾದಲ್ಲಿ ನಯನತಾರಾ ಅವರ ಬಗ್ಗೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ತಿರುಪತಿ ತಿರುಮಲ ಅಧಿಕಾರಿಗಳ ಮಧ್ಯಪ್ರವೇಶ ಕೂಡ ಆಗಿದೆ.

ಈ ಜೋಡಿ ಸಾಂಪ್ರದಾಯಿಕ ಉಡುಪಿನಲ್ಲೇ ದೇವಸ್ಥಾನ ಆವರಣಕ್ಕೆ ಪ್ರವೇಶ ಮಾಡಿದರು. ಹಳದಿ ಬಣ್ಣದ ಸೀರೆಯಲ್ಲಿ ನಯನತಾರಾ ಕಂಗೊಳಿಸುತ್ತಿದ್ದರೆ, ಬಿಳಿ ಬಣ್ಣದ ಅಂಗಿ ಮತ್ತು ಪಂಚೆ ತೊಟ್ಟಿದ್ದರು ವಿಘ್ನೇಶ್. ಆದರೆ, ನಯನತಾರಾ ದೇವಸ್ಥಾನದ ಆವರಣದ ಒಳಗೆ ಚಪ್ಪಲಿ ಧರಿಸಿದ್ದರು ಎನ್ನುವುದೇ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ.

ಪತಿ ವಿಘ್ನೇಶ್ ಬರಿಗಾಲಲ್ಲಿ ನಡೆದುಕೊಂಡು ಬಂದರೆ, ನಯನತಾರಾ ಚಪ್ಪಲಿ ಧರಿಸಿದ್ದರಂತೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ನಯನತಾರಾ ವಿರುದ್ಧ ಭಕ್ತರು ಮುಗಿಬಿದ್ದಿದ್ದರು. ವಿವಾದ ಸೃಷ್ಟಿ ಆಗುತ್ತಿದ್ದಂತೆಯೇ ತಿರುಮಲ ಅಧಿಕಾರಿಗಳು ಮಧ್ಯೆ ಪ್ರವೇಶಿಸಿ, ನಯನತಾರಾ ಚಪ್ಪಲಿ ಧರಿಸಿ ಓಡಾಡಿದ ಸ್ಥಳದಲ್ಲಿ ಭಕ್ತರಿಗೆ ಪಾದರಕ್ಷೆಗಳನ್ನು ತೊಡಲು ಅವಕಾಶವಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...