ರಾಜ್ಯದಲ್ಲಿ ಆ್ಯಸಿಡ್ ದಾಳಿಗಳು ಹೆಚ್ಚಾಗುತ್ತಿದೆ. ಆ್ಯಸಿಡ್ ದಾಳಿ ವಿರುದ್ಧ ಕಠಿಣ ಕಾನೂನು ರೂಪಿಸಲು ಕಾನೂನು ಸಚಿವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ, ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆ್ಯಸಿಡ್ ದಾಳಿ ವಿರುದ್ಧ ಕಠಿಣ ಕಾನೂನು ರೂಪಿಸಲು ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದ ಹಾಗೇ ನೋಡಿಕೊಳ್ಳಲಾಗುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.
ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಗಲಾಟೆ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಈಗಾಗಲೇ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಅಧಿಕಾರಿಗಳ ಸಭೆ ಕರೆದು ಸೂಚನೆ ನೀಡಿದ್ದೇನೆ.
ರಾಜ್ಯದಲ್ಲಿ ಶಾಂತ ಪರಿಸ್ಥಿತಿ ಇದೆ.ಎಲ್ಲಾ ಸಮುದಾಯದ ನಾಯಕರು ಸೌಹಾರ್ದತೆ ಕಾಪಾಡಬೇಕೆಂದು ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.
