ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ನೂಪರ್ ಶರ್ಮಾ ವಿವಾದಾತ್ಮಕ ಹೇಳಿಕೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನೂಪುರ್ ಶರ್ಮಾ ಕ್ರಿಮಿನಲ್ ಕೇಸ್ ಹಾಕಬೇಕು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಮೊಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕವಾಗಿ ಮಾತನಾಡಿರುವ ನೂಪುರ್ ಶರ್ಮಾ ಮೇಲೆ ಕ್ರಿಮಿನಲ್ ಕೇಸ್ ಹಾಕಬೇಕು.
ನೂಪುರ್ ಶರ್ಮಾ ಜೊತೆಗೆ ಮತ್ತೊಬ್ಬರು ಮಾತನಾಡಿದ್ದಾರೆ. ಅವರ ವಿರುದ್ಧವೂ ಕ್ರಿಮಿನಲ್ ಕೇಸ್ ಹಾಕಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.
ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಮಾತನಾಡುವುದು ಸರಿಯಲ್ಲ. ಇದು ಮತ್ತೊಂದು ಸಮುದಾಯಕ್ಕೆ ದ್ವೇಷ ಹರಡಿದಂತಾಗುತ್ತದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರತಿಭಟನೆ ಮಾಡುವವರು ಶಾಂತಿಯುತ ಪ್ರತಿಭಟನೆ ಮಾಡಬೇಕು ಎಂದು ಹೇಳಿದ್ದಾರೆ.