Friday, March 20, 2026
Friday, March 20, 2026

ವಿಶ್ವಸಂಸ್ಥೆ ಕಾರ್ಯದರ್ಶಿ ಗಳ ರಾಯಭಾರಿಯಾಗಿ ಭಾರತೀಯ ಅಮನ್ ದೀಪ್ ಸಿಂಗ್

Date:

ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರ ತಂತ್ರಜ್ಞಾನದ ರಾಯಭಾರಿಯಾಗಿ ಹಿರಿಯ ಭಾರತೀಯ ರಾಜತಾಂತ್ರಿಕ ಅಧಿಕಾರಿ ಅಮನ್ ದೀಪ್ ಸಿಂಗ್ ಗಿಲ್ ಅವರನ್ನು ನೇಮಕ ಮಾಡಲಾಗಿದೆ.

ಸುಸ್ಥಿರ ಅಭಿವೃದ್ಧಿಯಲ್ಲಿ ಪ್ರಗತಿ ಮತ್ತು ಪರಿಣಾಮಕಾರಿ ಡಿಜಿಟಲ್ ತಂತ್ರಜ್ಞಾನ ಕುರಿತ ಜ್ಞಾನಕ್ಕಾಗಿ ಅವರನ್ನು ಡಿಜಿಟಲ್ ತಂತ್ರಜ್ಞಾನ ಕುರಿತ ಚಿಂತನೆಯ ನಾಯಕ ಎಂದು ವಿಶ್ವಸಂಸ್ಥೆ ಬಣ್ಣಿಸಿದೆ.

ಭಾರತದ ರಾಯಭಾರಿಯಾಗಿದ್ದ ಗಿಲ್, 2016 ರಿಂದ 2018ರವರೆಗೆ ಜಿನಿವಾದಲ್ಲಿನ ನಿಶಸ್ತ್ರೀಕರಣ ಸಮ್ಮೇಳನದ ಶಾಶ್ವತ ಪ್ರತಿನಿಧಿಯಾಗಿದ್ದರು.

2018-2019ರಲ್ಲಿ ಡಿಜಿಟಲ್ ಸಹಕಾರ ಕುರಿತ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಯ ಉನ್ನತ ಮಟ್ಟದ ಸಮಿತಿಯ ಕಾರ್ಯಕಾರಿ ನಿರ್ದೇಶಕರಾಗಿಯೂ ಗಿಲ್ ಕೆಲಸ ಮಾಡಿದ್ದಾರೆ.

1992ರಲ್ಲಿ ಭಾರತದ ರಾಯಭಾರಿಯಾಗಿ ಸೇವೆಗೆ ಸೇರಿದ ಗಿಲ್, ತೆಹ್ರನ್ ಮತ್ತು ಕೊಲೊಂಬೊದಲ್ಲಿ ರಾಯಭಾರಿಯಾಗಿ ನಿಯೋಜನೆಯೊಂದಿಗೆ ಅನೇಕ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರು ಸ್ಟಾನ್ ಫೋರ್ಡ್ ವಿವಿಯ ಅತಿಥಿ ಸ್ಕಾಲರ್ ಆಗಿದ್ದರು.

ಪಂಜಾಬ್ ವಿವಿಯಿಂದ ಎಲೆಕ್ಟ್ರಾನಿಕ್ಸ್ ಹಾಗೂ ಎಲೆಕ್ಟ್ರೀಕಲ್ ಕಮ್ಯೂನಿಕೇಷನ್ ತಂತ್ರಜ್ಞಾನದಲ್ಲಿ ಪದವಿ ಪಡೆದಿರುವ ಗಿಲ್, ಲಂಡನ್ ನ ಕಿಂಗ್ಸ್ ಕಾಲೇಜಿನಿಂದ ಪಿಹೆಚ್ ಡಿ ಪದವಿ ಪಡೆದಿದ್ದಾರೆ. ಜಿನಿವಾ ವಿವಿಯಿಂದ ಫ್ರೆಂಚ್ ಇತಿಹಾಸ ಮತ್ತು ಭಾಷೆಯಲ್ಲಿ ಡಿಪ್ಲೋಮಾ ಪಡೆದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...