Thursday, July 9, 2026
Thursday, July 9, 2026

ಭಾರತೀಯ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಷ್ಯಾದಲ್ಲಿ ಪ್ರವೇಶ ನೀಡಿಕೆ

Date:

ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದ ಅರ್ಧದಲ್ಲೇ ಓದು ಬಿಟ್ಟು ಸ್ಥಳಾಂತರವಾದ ಭಾರತೀಯ ವಿದ್ಯಾರ್ಥಿಗಳಿಗೆ ರಷ್ಯಾದಲ್ಲಿ ಅಡ್ಮಿಷನ್​ ನೀಡಲು ನಿರ್ಧರಿಸಲಾಗಿದೆ.

ವಿದ್ಯಾರ್ಥಿಗಳು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಿಂದ ವಂಚಿತರಾಗದಂತೆ ನೋಡಿಕೊಳ್ಳುವ ದೃಷ್ಟಿಯಿಂದ ರಷ್ಯಾದ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ನೀಡಲಾಗುವುದು ಎಂದು ನವದೆಹಲಿಯಲ್ಲಿರುವ ರಷ್ಯಾದ ರಾಯಭಾರಿ ಕಚೇರಿಯ ಉಪ ಮುಖ್ಯಸ್ಥ ರೋಮನ್ ಬಾಬುಶ್ಕಿನ್ ತಿಳಿಸಿದರು.

ರಷ್ಯಾದ ಒಕ್ಕೂಟದ ಗೌರವ ರಾಯಭಾರಿ ಮತ್ತು ತಿರುವನಂತಪುರಂನಲ್ಲಿರುವ ರಷ್ಯನ್ ಹೌಸ್‌ನ ನಿರ್ದೇಶಕ ರತೀಶ್ ಸಿ.ನಾಯರ್ ಮಾತನಾಡಿ, ಉಕ್ರೇನ್​​ನಲ್ಲಿ ಭಾರತೀಯ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಹೊಂದಿದ್ದರೆ, ಅದನ್ನು ರಷ್ಯಾದ ವಿಶ್ವವಿದ್ಯಾಲಯಗಳಲ್ಲಿ ಪಡೆಯಲು ಸಾಧ್ಯತೆಯಿದೆ ಎಂದು ತಿಳಿಸಿದರು.

ಫೆಬ್ರುವರಿಯಿಂದಲೂ ಉಕ್ರೇನ್ ಮತ್ತು ರಷ್ಯಾ ಯುದ್ಧ ನಡೆಯುತ್ತಿದೆ. ಇದರಿಂದ ಉಕ್ರೇನ್​ನಲ್ಲಿ ಶಿಕ್ಷಣ ಪಡೆಯುತ್ತಿದ್ದ ಭಾರತದ 20 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅರ್ಧದಲ್ಲೇ ಶಿಕ್ಷಣ ಮೊಟಕುಗೊಳಿಸಿ ತವರಿಗೆ ಮರಳಿದ್ದಾರೆ. ಈ ವಿದ್ಯಾರ್ಥಿಗಳ ಭವಿಷ್ಯದ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, ಭಾರತೀಯ ವಿದ್ಯಾರ್ಥಿಗಳಿಗೆ ರಷ್ಯಾದ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ನೀಡಲಾಗುವುದು. ರಷ್ಯಾದಲ್ಲಿ ವಿದ್ಯಾರ್ಥಿಗಳು ಈ ಹಿಂದಿನ ವರ್ಷ ಬಿಟ್ಟುಹೋದ ಕೋರ್ಸ್‌ಗಳನ್ನು ಮುಂದುವರಿಸಬಹುದು ಎಂದು ಹೇಳಿದರು.

ಉಕ್ರೇನ್‌ನಲ್ಲಿ ಪಾವತಿಸುವ ಶುಲ್ಕಕ್ಕಿಂತ ರಷ್ಯಾದಲ್ಲಿ ಅಧಿಕವಾಗಿರುತ್ತದೆ ಎಂಬ ಸುಳಿವು ಕೂಡ ನೀಡಿದರು.
ಕೇರಳದ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಗಳು ಮತ್ತು ಇತರ ಶೈಕ್ಷಣಿಕ ದಾಖಲೆಗಳೊಂದಿಗೆ ತಿರುವನಂತಪುರಂನಲ್ಲಿರುವ ರಷ್ಯನ್ ಹೌಸ್​ಗೆ ಭೇಟಿ ಕೊಡಬಹುದು. ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಇಚ್ಛಿಸುವ ರಷ್ಯಾದ ವಿಶ್ವವಿದ್ಯಾಲಯಗಳಿಗೆ ದಾಖಲಾತಿಗಳನ್ನು ರವಾನಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.ಭಾರತೀಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಅವರ ಸಾವಿಗೆ ರಷ್ಯ ಕಾರಣವಾದ ಸುದ್ದಿಯನ್ನ ಇಲ್ಲಿ ಸ್ಮರಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...