Monday, March 24, 2025
Monday, March 24, 2025

ಜೂನ್ 16 ರಂದು ಕುವೆಂಪು ವಿವಿ ಘಟಿಕೋತ್ಸವ

Date:

ಕುವೆಂಪು ವಿಶ್ವವಿದ್ಯಾಲಯವು ಜೂನ್ 16ರಂದು ಏರ್ಪಡಿಸಿರುವ 31 ಮತ್ತು 32ನೇ ಘಟಿಕೋತ್ಸವದಲ್ಲಿ ಸಾರ್ವಜನಿಕ ಆಡಳಿತದಲ್ಲಿ ಅಪಾರ ಸೇವೆ ಸಲ್ಲಿಸಿರುವ ಹಾಗೂ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ. ಹೆಚ್. ಶಂಕರಮೂರ್ತಿ ಅವರು ಮತ್ತು ಇತರೆ ಐದು ಮಂದಿಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದೆ.

ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗವು ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿರುವ ವಿವಿಯ ಆಡಳಿತವು, ಎರಡು ಘಟಿಕೋತ್ಸವಗಳಿಂದ ಒಟ್ಟು ಆರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿರುವ ವಿಷಯವನ್ನು ತಿಳಿಸಿದೆ. ಕೊರೊನಾ ಹಾವಳಿ ಹಾಗೂ ಅತಿಥಿಗಳ ಸಮಯ ಹೊಂದಾಣಿಕೆ ಸಾಧ್ಯವಾಗದ ಕಾರಣ ನೆನೆಗುದಿಗೆ ಬಿದ್ದಿದ್ದ ವಿವಿಯ ಎರಡು ಶೈಕ್ಷಣಿಕ ಘಟಿಕೋತ್ಸವಗಳನ್ನು ಪ್ರಸ್ತುತ ಜೂನ್ 16ರಂದು ಒಂದೇ ದಿನ ನಡೆಸಲು ವಿಶ್ವವಿದ್ಯಾಲಯವು ಮುಂದಾಗಿದೆ. 2019-20 ಮತ್ತು 2020-21ನೇ ಸಾಲಿನ ಘಟಿಕೋತ್ಸವಗಳನ್ನು ರಾಜ್ಯಪಾಲರ ಅನುಮತಿ ಮೇರೆಗೆ ಒಂದೇ ದಿನ ಆಯೋಜಿಸಲು ಸಿದ್ಧತೆ ಕೈಗೊಂಡಿದೆ.

31ನೇ ಘಟಿಕೋತ್ಸವದ ಭಾಗವಾಗಿ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ. ಹೆಚ್. ಶಂಕರಮೂರ್ತಿ, ಶಿಕ್ಷಣತಜ್ಞೆ ಗೀತಾ ನಾರಾಯಣನ್ ಹಾಗೂ ಯೋಗ ಗುರು ಭ. ಮ. ಶ್ರೀಕಂಠ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನಿಸಲಾಗುತ್ತಿದೆ. 32ನೇ ಘಟಿಕೋತ್ಸವದ ಭಾಗವಾಗಿ ಶಿಕ್ಷಣತಜ್ಞ, ಕುಲಪತಿ ಪ್ರೊ. ಟಿ. ವಿ. ಕಟ್ಟಿಮನಿ, ಅಂಧ ಕ್ರಿಕೆಟಿಗ ಮಹಾಂತೇಶ್ ಜಿ. ಕಿವಡಸಣ್ಣವರ್, ಯೋಗಗುರು ಬಾ. ಸು. ಅರವಿಂದ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ.

ಘಟಿಕೋತ್ಸವ ಕಾರ್ಯಕ್ರಮಕ್ಕೆ ಕುಲಾಧಿಪತಿ ಮತ್ತು ರಾಜ್ಯ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಸಹಕುಲಾಧಿಪತಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ ಆಗಮಿಸಿಲಿದ್ದಾರೆ. ಎರಡೂ ಘಟಿಕೋತ್ಸವಗಳ ಮುಖ್ಯಭಾಷಣವನ್ನು ಮೈಸೂರಿನ ಭಾರತೀಯ ಆಹಾರ ತಾಂತ್ರಿಕ ಸಂಶೋಧನಾಲಯದ ನಿರ್ದೇಶಕಿ ಡಾ. ಶ್ರೀದೇವಿ ಅನ್ನಪೂರ್ಣ ಸಿಂಗ್ ಅವರು ಮಾಡಲಿದ್ದಾರೆ.

31ನೇ ಘಟಿಕೋತ್ಸವದಲ್ಲಿ ವಿವಿಧ ರ‍್ಯಾಂಕ್ ಹಾಗು ಪದವಿ ಪಡೆಯುವವರ ಮಾಹಿತಿ: 2019-20ನೇ ಸಾಲಿನ ಘಟಿಕೋತ್ಸವದಲ್ಲಿ 61 ಪುರುಷರು ಹಾಗೂ 30 ಮಹಿಳೆಯರು ಸೇರಿ ಒಟ್ಟು 9194 ಅಭ್ಯರ್ಥಿಗಳು ಪಿಹೆಚ್.ಡಿ. ಪದವಿ ಪಡೆಯಲು ಅರ್ಹರಾಗಿರುತ್ತಾರೆ. ಈ ಘಟಿಕೋತ್ಸವದಲ್ಲಿ 10214 ಪುರುಷರು ಹಾಗೂ 15221 ಮಹಿಳೆಯರು ಸೇರಿ ಒಟ್ಟು 25435ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿರುತ್ತಾರೆ.
ಸದರಿ ಘಟಿಕೋತ್ಸವದಲ್ಲಿ 127 ಸ್ವರ್ಣಪದಕಗಳು ಇದ್ದು, ಅವುಗಳನ್ನು 20 ಪುರುಷರು ಹಾಗೂ 51 ಮಹಿಳೆಯರು ಸೇರಿ ಒಟ್ಟು 71 ವಿದ್ಯಾರ್ಥಿಗಳು ಹಂಚಿಕೊಂಡಿರುತ್ತಾರೆ. 17 ನಗದು ಬಹುಮಾನಗಳು ಇದ್ದು, ಎಲ್ಲವುಗಳನ್ನು 13 ಮಹಿಳಾ ವಿದ್ಯಾರ್ಥಿಗಳು ಹಂಚಿಕೊಂಡಿರುತ್ತಾರೆ.

ಕನ್ನಡ ಭಾರತಿ ವಿಭಾಗದ ಪ್ರಣೀತಾ ಎಂ. ಟಿ. ಅವರು ಒಟ್ಟು 8 ಸ್ವರ್ಣ ಪದಕ ಹಾಗೂ 2 ನಗದು ಬಹುಮಾನಗಳನ್ನು ಪಡೆದಿರುತ್ತಾರೆ. ವಿವಿಯ ಎಂ. ಬಿ. ಎ. ಯ ಯತೀಶ್ ಕೆ. ಯು. ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗದ ಅನುಷಾ ಎಸ್., ಎನ್. ಇ. ಎಸ್. ಸಂಸ್ಥೆಯ ಬಿ. ಕಾಂ. ಕೋರ್ಸ್ ನ ನಿವ್ಯಾ ಕೆ. ನಾಯಕ್ ತಲಾ ಐದು ಸ್ವರ್ಣಪದಕಗಳನ್ನು ಪಡೆದಿದ್ದಾರೆ.

ದೂರಶಿಕ್ಷಣ ನಿರ್ದೇಶನಾಲಯದಡಿ ಕಲಾ, ವಾಣಿಜ್ಯ, ಕಾನೂನು, ವಿಜ್ಞಾನ ನಿಖಾಯಗಳಡಿ 12923 ವಿದ್ಯಾರ್ಥಿಗಳು ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.

32ನೇ ಘಟಿಕೋತ್ಸವದಲ್ಲಿ ವಿವಿಧ ರ‍್ಯಾಂಕ್ ಹಾಗು ಪದವಿ ಪಡೆಯುವವರ ಮಾಹಿತಿ: 2020-21ನೇ ಸಾಲಿನ ಘಟಿಕೋತ್ಸವದಲ್ಲಿ 82 ಪುರುಷರು ಹಾಗೂ 47 ಮಹಿಳೆಯರು ಸೇರಿ ಒಟ್ಟು 1294ಅಭ್ಯರ್ಥಿಗಳು ಪಿಹೆಚ್.ಡಿ. ಪದವಿ ಪಡೆಯಲು ಅರ್ಹರಾಗಿರುತ್ತಾರೆ. ಈ ಘಟಿಕೋತ್ಸವದಲ್ಲಿ 8324 ಪುರುಷರು ಹಾಗೂ 1231 ಮಹಿಳೆಯರು ಸೇರಿ ಒಟ್ಟು 20638 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿರುತ್ತಾರೆ.

ಸದರಿ ಘಟಿಕೋತ್ಸವದಲ್ಲಿ 132 ಸ್ವರ್ಣಪದಕಗಳು ಇದ್ದು, ಅವುಗಳನ್ನು 14 ಪುರುಷರು ಹಾಗೂ 52 ಮಹಿಳೆಯರು ಸೇರಿ ಒಟ್ಟು 66 ವಿದ್ಯಾರ್ಥಿಗಳು ಹಂಚಿಕೊಂಡಿರುತ್ತಾರೆ. 17 ನಗದು ಬಹುಮಾನಗಳು ಇದ್ದು, 13 ಅನ್ನು ಮಹಿಳಾ ವಿದ್ಯಾರ್ಥಿಗಳು ಹಾಗೂ ಎರಡನ್ನು ಪುರುಷ ವಿದ್ಯಾರ್ಥಿಗಳು ಸೇರಿ ಒಟ್ಟು 15 ವಿದ್ಯಾರ್ಥಿಗಳು ಹಂಚಿಕೊಂಡಿರುತ್ತಾರೆ.

ಕನ್ನಡ ಭಾರತಿ ವಿಭಾಗದ ದಿವ್ಯಾ ಹೆಚ್. ಎನ್. ಒಟ್ಟು 11 ಸ್ವರ್ಣ ಪದಕ ಹಾಗೂ 2 ನಗದು ಬಹುಮಾನಗಳನ್ನು ಪಡೆದಿರುತ್ತಾರೆ. ಎ. ಬಿ. ಎ. ವಿಭಾಗದ ಪ್ರಿಯಾಂಕ ಟಿ. ಆರು ಸ್ವರ್ಣಪದಕಗಳನ್ನು ಜಯಿಸಿದ್ದಾರೆ. ಎಂ. ಎ. ಸಮಾಜಶಾಸ್ರ್ತ ವಿಭಾಗದ ತನೂಷಾ ಸಿ., ರಸಾಯನಶಾಸ್ತ್ರ ವಿಭಾಗದ ಸಂಯುಕ್ತ ಪೈ ಎಂ. ಹಾಗೂ ಎಟಿಎನ್‌ಸಿಸಿಯ ಬಿ. ಕಾಂ. ಕೋರ್ಸ್ ನ ಮೇಘನ ತಲಾ ಐದು ಚಿನ್ನದ ಪದಕಗಳನ್ನು ಗಳಿಸಿಕೊಂಡಿದ್ದಾರೆ.

ದೂರಶಿಕ್ಷಣ ನಿರ್ದೇಶನಾಲಯದಡಿ ಕಲಾ, ವಾಣಿಜ್ಯ, ಕಾನೂನು, ವಿಜ್ಞಾನ ನಿಕಾಯಗಳಡಿ 7188 ವಿದ್ಯಾರ್ಥಿಗಳು ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

BJP Protest 18 ಶಾಸಕರ ಅಮಾನತು. ಸರ್ಕಾರದಿಂದ ಅಧಿಕಾರ ದುರುಪಯೋಗ. ಜಿಲ್ಲಾ ಬಿಜೆಪಿ‌‌ ಪ್ರತಿಭಟನೆ

BJP Protest ಮುಸ್ಲಿಮರಿಗೆ ಅಸಂವಿಧಾನಿಕ 4% ಮೀಸಲಾತಿ, SCP-TSP ನಿಧಿಗಳ ದುರ್ಬಳಕೆ,...

ಶೀಘ್ರ ಬಾಡಿಗೆ ಕರಾರನ್ನ ನವೀಕರಣಗೊಳಿಸಿ- ಪಿ.ಮಂಜುನಾಥ್

ಶಿವಮೊಗ್ಗ ನಗರದ ಬಸ್ ನಿಲ್ದಾಣದ ಅವರಣದಲ್ಲಿರುವ ಅಂಗಡಿ ಮಳಿಗೆಗಳ ಬಾಡಿಗೆ ಕರಾರು...

World Tuberculosis Day ಕ್ಷಯರೋಗವು ಹರಡುವ ರೋಗ ಕುಟುಂಬಸ್ಥರು ಬಹಳ ಎಚ್ಚರದಿಂದಿರಬೇಕು- ಡಾ.ಕೆ. ಎಸ್.ನಟರಾಜ್

World Tuberculosis Day ಕ್ಷಯರೋಗ ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾಗಿದ್ದು ಭಾರತ...

Thawar Chand Gehlot ರಾಜಭವನದಲ್ಲಿ ಸಂಭ್ರಮಿಸಿದ “ಚಂದನ” ದ ಚೈತ್ರಾಂಜಲಿ, ಯುಗಾದಿ ಶುಭಾಶಯ ಕೋರಿದ ರಾಜ್ಯಪಾಲ‌ ಗೆಹ್ಲೋಟ್

Thawar Chand Gehlot ಬೆಂಗಳೂರು 22.03.2025: ಹಿಂದುಗಳ ಹೊಸ ವರ್ಷವೆಂದೇ ಕರೆಯಲ್ಪಡುವ...