Wednesday, March 19, 2025
Wednesday, March 19, 2025

ಬೆಳೆ ವಿಮಾ ಯೋಜನೆ ನೋಂದಾವಣೆ ಬಗ್ಗೆ ಮಾಹಿತಿ

Date:

ಕೃಷಿ ಇಲಾಖೆಯ ಬೆಳೆ ವಿಮಾ ಯೋಜನೆಗೆ ಸಂಬಂಧಪಟ್ಟಂತೆ 2022ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆ ಗಳಲ್ಲಿ ಒಟ್ಟು 36 ಆಹಾರ, ಎಣ್ಣೆಕಾಳು, ವಾರ್ಷಿಕ ವಾಣಿಜ್ಯ ಮತ್ತು ತೋಟ ಗಾರಿಕಾ ಬೆಳೆಗಳನ್ನು ಅಧಿಸೂಚಿಸಲಾಗಿದೆ. ತಾಲೂಕಿನ ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಧಿಸೂಚಿಸಲಾಗಿದೆ.

ಮುಂಗಾರು ಹಂಗಾಮಿನಲ್ಲಿ, ರೈತರು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ 29 ಪ್ರೀಮಿಯಂ ಮೊತ್ತವನ್ನು ಪಾವತಿಸಬೇಕಾಗಿರುತ್ತದೆ ಮತ್ತು ವಾರ್ಷಿಕ ವಾಣಿಜ್ಯ ಮತ್ತು ತೋಟಗಾರಿಕಾ ಬೆಳೆಗಳಿಗೆ ಶೇ.5 ರಷ್ಟು ಪ್ರೀಮಿಯಂ ಮೊತ್ತವನ್ನು ಪಾವತಿಸಬೇಕಾಗಿರುತ್ತದೆ

ಈ ಯೋಜನೆಯ ಮಾರ್ಗಸೂಚಿಯನ್ವಯ ಬೆಳೆಸಾಲ ಪಡೆದ ಹಾಗೂ ಬೆಳೆಸಾಲ ಪಡೆಯದ ರೈತರು ಬೆಳೆ ವಿಮೆಯಡಿ ಒಳಪಡುವುದು ಐಚ್ಛಿಕವಾಗಿರುತ್ತದೆ.

ಬೆಳೆಸಾಲ ಪಡೆಯದ ರೈತರು ಯೋಜನೆಯಲ್ಲಿ ಪಾಲ್ಗೊಳ್ಳಲು ಹತ್ತಿರದ ಬ್ಯಾಂಕುಗಳು, ಸಾಮಾನ್ಯ ಸೇವಾ ಕೇಂದ್ರಗಳನ್ನು ಅಥವಾ ಗ್ರಾಮಾ ಒನ್ ಕೇಂದ್ರಗಳನ್ನು ಸಂಪರ್ಕಿಸಿ ಆರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ, ದಾಖಲಾತಿಗಳಾದ ಪಹಣಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಆಧಾರ್ ಪ್ರತಿಯನ್ನು ನೀಡಬೇಕು. ಬ್ಯಾಂಕಿನಲ್ಲಿ ಖಾತೆಯನ್ನು ತೆರೆದು ವಿಮಾ ಕಂತನ್ನು ಕಟ್ಟಬೇಕು.

ಬೆಳೆ ವಿಮೆ ಯೋಜನೆಯಡಿ ಪಾಲ್ಗೊಳ್ಳುವ ರೈತರು ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ಅರ್ಜಿ ನಮೂನೆಯಲ್ಲಿ ನಮೂದಿಸತಕ್ಕದ್ದು. ಈ ಯೋಜನೆಯಡಿ ಬೆಳೆ ಸಾಲ ಪಡೆಯದ ರೈತರು ಅಂದಾಜು ಬೆಳೆ ಬಿತ್ತನೆ ಆಧಾರದ ಮೇಲೆ ಬಿತ್ತನೆ ಪೂರ್ವದಲ್ಲಿ ಪಾಲ್ಗೊಳ್ಳಬಹುದು.

ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ, ಭಾಗವಹಿಸಲು ಇಚ್ಛೆಪಡದೇ ಇದ್ದಲ್ಲಿ, ಈ ವಿಷಯ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು, ಬೆಳೆವಿಮೆ ಯೋಜನೆಯಿಂದ ಕೈಬಿಡಲಾಗುತ್ತದೆ.

ಬೆಳೆ ವಿಮೆಗೆ ನೊಂದಾಯಿಸಿದ ನಂತರ, ಬೇರೆ ಬೆಳೆ ಬಿತ್ತನೆ ಮಾಡಿದಲ್ಲಿ ಯೋಜನೆಯಲ್ಲಿ ಭಾಗವಹಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕಿಂತ 2 ದಿವಸಗಳು ಮುಂಚಿತವಾಗಿ ನೋಂದಾಯಿಸಿದ ಆರ್ಥಿಕ ಸಂಸ್ಥೆಗಳಲ್ಲಿ ಬಿತ್ತನೆ ದೃಢೀಕರಣ ಪತ್ರ ನೀಡಿ ವಿಮೆ ಮಾಡಿಸಿದ ಬೆಳೆಯನ್ನು ಬದಲಾಯಿಸತಕ್ಕದೆ. ಅಂತಹ ಸಂದರ್ಭದಲ್ಲಿ ಹೆಚ್ಚುವರಿ ವಿಮಾ ಕಂತಿನ ವ್ಯತ್ಯಾಸದ ಮೊತ್ತವನ್ನು ರೈತರು ಭರಿಸತಕ್ಕದ್ದು. ಅಥವಾ ಹೆಚ್ಚುವರಿ ವಿಮಾ ಕಂತನ್ನು ರೈತರಿಗೆ ಮರುಪಾವತಿಸುತ್ತದೆ.

2022ರ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪ ಅಂದರೆ, ಆಲಿಕಲ್ಲು ಮಳೆ, ಭೂಕುಸಿತ ಮತ್ತು ಬೆಳೆ ಮುಳುಗಡೆ ಇವುಗಳಿಂದ ಬೆಳೆ ನಾಶ ಸಂಭವಿಸಿದಲ್ಲಿ, ಪ್ರತ್ಯೇಕವಾಗಿ ಬೆಳೆ ನಮ್ಮ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ನೀಡಲಾಗುತ್ತದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲೆ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ 2 ವಾರಗಳೊಳಗೆ ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ಪ್ರತ್ಯೇಕವಾಗಿ ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥ ಪಡಿಸಲಾಗುತ್ತದೆ.

ಈ ಯೋಜನೆಯಡಿ ರೈತರು ಪಾಲ್ಗೊಳ್ಳಲು ಕೊನೆಯ ದಿನಾಂಕಗಳು5 ಹಂತಗಳಲ್ಲಿದೆ. ಜೂ.15, ಜೂ.30, ಜು.15, ಜು.31ಹಾಗೂ ಆ.16 ಆಗಿದೆ. ಜಿಲ್ಲಾವಾರು ಬೆಳೆವಾರು ಕೊನೆಯ ದಿನಾಂಕದ ವಿವರವನ್ನು ಹತ್ತಿರದ ರೈತ ಸಂಪರ್ಕ ಕೇಂದ್ರದಿಂದ ಪಡೆಯಬಹುದು. ಸಂರಕ್ಷಣೆ ತಂತ್ರಾಂಶದ ಮೂಲಕ ಪಡೆಯಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kumsi MESCOM ಕುಂಸಿ ಮೆಸ್ಕಾಂ ಕಛೇರಿಯಲ್ಲಿ ಮಾರ್ಚ್ 18. ಜನಸಂಪರ್ಕ ಸಭೆ

Kumsi MESCOM ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.18 ರಂದು ಬೆಳಿಗ್ಗೆ...

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...