Wednesday, March 12, 2025
Wednesday, March 12, 2025

ರಾಜ್ಯದಲ್ಲಿನ ಆಹಾರ ಪಾರ್ಕ್ ಗಳಪರಿಸ್ಥಿತಿ ವರದಿಗೆ ಬಿ.ಸಿ.ಪಾಟೀಲ್ ಸೂಚನೆ

Date:

ರಾಜ್ಯದಲ್ಲಿ ಈಗಾಗಲೇ ಸ್ಥಾಪಿನೆಯಾಗಿರುವ ಆಹಾರ ಪಾರ್ಕುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಉದ್ದೇಶದಿಂದ ಪಾರ್ಕ್‌ಗಳ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವರದಿ ಮಾಹಿತಿಯನ್ನು
ನಬಾರ್ಡ್ ಸಂಸ್ಥೆಯ ಮೂಲಕ ಕೈಗೊಂಡು ನೀಡುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿ ಕೃಷಿ ಸಚಿವರ ಅಧ್ಯಕ್ಷತೆಯಲ್ಲಿ ಆಹಾರ ಕರ್ನಾಟಕ ನಿಯಮಿತ ಸಂಸ್ಥೆಯ ಆಡಳಿತ ಮಂಡಳಿಯ ಸಭೆ ನಡೆಯಿತು.
ಸಭೆಯಲ್ಲಿ ವಿಜಯಪುರ ಜಿಲ್ಲೆಯ ಇಟ್ಟಂಗಿಹಾಳದಲ್ಲಿ ಸ್ಥಾಪಿಸಲಾಗುತ್ತಿರುವ ಆಹಾರ ಪಾರ್ಕಿನಲ್ಲಿ , ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ಅನೇಕ ಬೆಳೆಗಳಿಗೆ ಮೌಲ್ಯವರ್ಧನೆ ಹಾಗೂ ಸಂಸ್ಕರಣೆ ಕೈಗೊಳ್ಳಲು ಕೈಗಾರಿಕೆಗಳನ್ನು ಸ್ಥಾಪಿಸಲು ಕೈಗಾರಿಕೆ ನಿವೇಶನಗಳನ್ನು ಕೆಐಎಡಿಬಿ ಅಥವಾ ಸೂಕ್ತ ಸರ್ಕಾರಿ ಸಂಸ್ಥೆಯ ಮುಖಾಂತರ ಅಭಿವೃದ್ಧಿಪಡಿಸಿ ಉದ್ದಿಮೆದಾರರಿಗೆ ಹಂಚಿಕೆ ಮಾಡಲು ತೀರ್ಮಾನಿಸಲಾಯಿತು.

ಅಲ್ಲದೇ ಆಹಾರ ಪಾರ್ಕಿನಲ್ಲಿ ರೈತರಿಗೆ ಮತ್ತು ರೈತ ಉತ್ಪಾದಕ ಸಂಸ್ಥೆಗಳಿಗೆ , ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಅನುಕೂಲವಾಗುವಂತೆ ಸಾಮಾನ್ಯ ಮೂಲಭೂತ ಸೌಕರ್ಯಗಳಾದ ಶೀತಲಗೃಹಗಳು , ಗೋದಾಮುಗಳು , ಸಂಸ್ಕರಣೆ ಘಟಕಗಳು , ಪ್ಯಾಕಿಂಗ್ ಘಟಕಗಳು , ಪರೀಕ್ಷೆಯ ಲ್ಯಾಬೊರೇಟರಿಗಳು ಹಾಗೂ ಪ್ರಮಾಣೀಕರಣ ಕೇಂದ್ರಗಳನ್ನು ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲು ತೀರ್ಮಾನಿಸಲಾಯಿತು.

ಆಹಾರ ಕರ್ನಾಟಕ ನಿಯಮಿತ ಸಂಸ್ಥೆಯಿಂದ ವಿಜಯಪುರ ಜಿಲ್ಲೆಯ ಇಟ್ಟಂಗಿಹಾಳದಲ್ಲಿ ಸ್ಥಾಪಿಸಲಾಗುತ್ತಿರುವ ಆಹಾರ ಪಾರ್ಕಿನ ಕಾಂಪೌಂಡ್ ಗೋಡೆ ನಿರ್ಮಾಣಕ್ಕೆ ಟೆಂಡರ್‌ ಅನುಮೋದನೆ ಮೂಲಕ ಚಾಲನೆ ನೀಡಲಾಯಿತು.

2022-23ರ ಬಜೆಟ್ ಘೋಷಣೆಯಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಿನಿ ಆಹಾರ ಪಾರ್ಕ್‌ಗಳನ್ನು ಸ್ಥಾಪಿಸುವ ಉದ್ದೇಶದಿಂದ ಮೊದಲನೇ ಹಂತದಲ್ಲಿ ಜಮೀನನ್ನು ಗುರುತಿಸಲು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಕ್ತ ನಿರ್ದೇಶನವನ್ನು ಈಗಾಗಲೆ ನೀಡಲಾಗಿದೆ. ಸರ್ಕಾರಿ ಜಮೀನು ಲಭ್ಯತೆ ಇಲ್ಲದ ಪಕ್ಷದಲ್ಲಿ ಬಳಕೆಯಾಗದೇ ಇರುವ ಕೃಷಿ ಅಥವಾ ತೋಟಗಾರಿಕೆ ವಿಶ್ವವಿದ್ಯಾನಿಲಯಗಳ , ಕೃಷಿ ಇಲಾಖೆಯ ಫಾರಂಗಳು ಹಾಗೂ ಕರ್ನಾಟಕ ರಾಜ್ಯ ಬೀಜ ನಿಗಮದ ಜಮೀನನ್ನು ಗುರುತಿಸಿ , ಈ ಉದ್ದೇಶಕ್ಕೆ ಬಳಸಿಕೊಳ್ಳಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ಕೃಷಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಶಿವಯೋಗಿ ಕಳಸದ, ಕೃಷಿ ಇಲಾಖಾ ಆಯುಕ್ತ ಶರತ್, ನಿರ್ದೇಶಕಿ ನಂದಿನಿ ಕುಮಾರಿ ಸೇರಿದಂತೆ ಇನ್ನೂ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆ

State Film Awards 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ...

Klive Special ಹೆತ್ತವಳಿಗೊಂದು ಕವನ-ನಮನ

Klive Special ದೇವರ ಸ್ವರೂಪ ಗರ್ಭದಲ್ಲಿ ಹೊತ್ತುನವಮಾಸಕ್ಕೆ ಹೆತ್ತುಮೌಲ್ಯಗಳನ್ನೇ ಬಿತ್ತುಸಲಹಿದೆ ನೀಡಿ ಕೈತುತ್ತು ಅಮ್ಮ...

Guarantee Scheme ಸತ್ಯ & ಶುದ್ಧ ಮಾರ್ಗದಿಂದ ರಾಷ್ಟ್ರ ಕಟ್ಟಲು ಸಾಧ್ಯ- ಸಿ.ಎಸ್.ಚಂದ್ರಭೂಪಾಲ್

Guarantee Scheme ಅಂತರಂಗ ಮತ್ತು ಬಹಿರಂಗ ಶುದ್ದಿಯಿಂದ ಹಾಗೂ ಸತ್ಯದ ಮಾರ್ಗದಲ್ಲಿ...