ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ಜೂ. 20 ರಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಚಾರದ ಮೇಲೆ ನಿರ್ಬಂಧ ವಿಧಿಸಲಾಗಿದೆ. ಬೆಂಗಳೂರಿನಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ.
ಪ್ರಧಾನಿ ನರೇಂದ್ರ ಮೋದಿ ಅವರು 2 ದಿನಗಳ ಕರ್ನಾಟಕ ಭೇಟಿ ಸಂಚಾರದ ಮೇಲೆ ಪರಿಣಾಮ ಬೀಳಲಿದೆ.
ಜೂ. 20 ರಂದು ಬೆಂಗಳೂರಿನ ಅನೇಕ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಭದ್ರತಾ ದೃಷ್ಟಿಯಿಂದ ಸಂಚಾರದ ಮೇಲೆ ಸಂಚಾರ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ. ಈ ಕುರಿತು ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಬಿ.ಆರ್. ರವಿಕಾಂತೇಗೌಡ ಅವರು ಮಾಹಿತಿ ನೀಡಿದ್ದಾರೆ.
ಪ್ರಧಾನಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಏರ್‌ಪೋರ್ಟ್ ಎಲಿವೇಟೆಡ್ ರಸ್ತೆ ಮೂಲಕ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆ ವರೆಗೂ ಏರ್ಪೋರ್ಟ್ ಎಲಿವೇಟಡ್ ರಸ್ತೆ ಬಳಸದಂತೆ ವಾಹನ ಸವಾರರಿಗೆ ಬೆಂಗಳೂರು ಪೊಲೀಸರು ಸೂಚನೆ ನೀಡಿದ್ದಾರೆ.
ಈ ರಸ್ತೆಗೆ ಬದಲಿ ಮಾರ್ಗಗಳನ್ನು ಬಳಸುವಂತೆ ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ