ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯನ್ನು ಸೋಮವಾರವೂ (ಜೂನ್ 20) ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಸತ್ಯಾಗ್ರಹ ನಡೆಸುತ್ತಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
ಈ ದೇಶದಲ್ಲಿ ಯಾರೊಬ್ಬರು ವಿಕ್ಟೋರಿಯಾ ರಾಣಿಯಾಗಲಿ ಅಥವಾ ರಾಜನಾಗಲಿ ಇಲ್ಲ.
ಎಲ್ಲರೂ ಕಾನೂನಿಗೆ ತಲೆಬಾಗಬೇಕು ಎಂದು ತಿರುಗೇಟು ನೀಡಿದೆ.
ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಕಿಡಿಕಾರಿದ್ದು, ನ್ಯಾಷನಲ್ ಹೆರಾಲ್ಡ್ ಹಗರಣದ ಮೂಲಕ ರಾಹುಲ್ ಗಾಂಧಿ ದೇಶದ ಹಣವನ್ನು ದುರುಪಯೋಗಪಡಿಸಿಕೊಳ್ಳುವಲ್ಲಿ ಶಾಮೀಲಾಗಿದ್ದಾರೆ ಎಂಬುದು ಸಾರ್ವಜನಿಕರಿಗೆ ತಿಳಿದಿದೆ ಎಂದು ಹೇಳಿದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನಾಲ್ಕನೇ ದಿನವೂ ರಾಹುಲ್ ಗಾಂಧಿಯನ್ನು ವಿಚಾರಣೆಗೊಳಪಡಿಸಿದೆ. ಮತ್ತೊಂದೆಡೆ ಕಾಂಗ್ರೆಸ್ ಪಕ್ಷ ದೆಹಲಿಯಲ್ಲಿ ಧರಣಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಸಂಬಿತ್ ಪಾತ್ರ ಈ ಪ್ರತಿಕ್ರಿಯೆ ನೀಡಿದ್ದಾರೆ.