Thursday, March 13, 2025
Thursday, March 13, 2025

ಯೋಗವು ಜಾತಿ ಧರ್ಮ ದೇಶಾತೀತವಾಗಿದೆ- ಈಶ್ವರಪ್ಪ

Date:

ಜಾತಿ, ವರ್ಗ, ಧರ್ಮ, ದೇಶಗಳಾಚೆ ಬೆಳೆದಿರುವ ನಮ್ಮ ಪ್ರಾಚೀನ ವಿದ್ಯೆಯಾದ ಯೋಗವು ಇಂದು ಇಡೀ ವಿಶ್ವವನ್ನು ಒಂದು ಮಾಡುತ್ತಿದೆ ಎಂದು ಶಾಸಕರಾದ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆ ಶಿವಮೊಗ್ಗ, ಮಹಾನಗರಪಾಲಿಕೆ ಶಿವಮೊಗ್ಗ, ಕೆಜಿಎಎಂಒಎ, ಎನ್‍ಐಎಂಎ ಮತ್ತು ಎಎಫ್‍ಐ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯೋಗಾಭ್ಯಾಸದಿಂದ ಶಾರೀರಿಕ ಮತ್ತು ಮಾನಸಿಕ ನೆಮ್ಮದಿ ಲಭಿಸುತ್ತದೆ. ಇದು ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಾಗಿಲ್ಲದ ಕಾರಣ ಎಲ್ಲರನ್ನು ಒಂದುಗೂಡಿಸುತ್ತಿದೆ. ಯೋಗಾಭ್ಯಾಸದಿಂದ ಎಲ್ಲರೂ ಸದೃಢರಾಗಬೇಕೆಂದು ವಿಶ್ವ ಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ ನಿರ್ಣಯ ಕೈಗೊಳ್ಳಲು ಕಾರಣಕರ್ತರಾದವರು ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರು. ಇಂದು 190 ರಾಷ್ಟ್ರಗಳು ಯೋಗ ದಿನಾಚರಣೆ ಆಚರಿಸುತ್ತಿವೆ ಎಂದ ಅವರು ನಾವು ಪ್ರತಿ ದಿನ ಯೋಗಾಭ್ಯಾಸವನ್ನು ಮಾಡುವ ಮೂಲಕ ಸದೃಢರಾಗಿರಬೇಕೆಂದು ಆಶಿಸಿದ್ದಾರೆ.

ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ್ ಮಾತನಾಡಿ, ಯೋಗ ನಮ್ಮ ದೇಶದ ಅತ್ಯಂತ ಪ್ರಾಚೀನ ಶಾಸ್ತ್ರ. ದೇಹ ಮತ್ತು ಮನಸ್ಸನ್ನು ಸುಸ್ಥಿತಿಯಲ್ಲಿಡುವ ಮಹಾನ್ ವಿದ್ಯೆ. ಇಂತಹ ಯೋಗ ದಿನಾಚರಣೆಯನ್ನು ಸರ್ಕಾರದಿಂದ ಆಯೋಜಿಸುತ್ತಿರುವುದು ವಿಶೇಷವಾಗಿದೆ. ಆಯುರ್ವೇದ ಕೂಡ ವಿಶ್ವದ ಮೊಟ್ಟ ಮೊದಲ ವೈದ್ಯಕೀಯ ಕ್ಷೇತ್ರ. ಧನ್ವಂತರಿ, ಆರ್ಯಭಟರಂತಹವರ ಮೂಲಕ ಅನೇಕ ಆದಿಗಳನ್ನು ಕೊಟ್ಟಂತಹ ದೇಶ ಮಧ್ಯದಲ್ಲಿ ಕಳೆದುಕೊಳ್ಳುವ ಪರಿಸ್ಥಿತಿ ಎದುರಿಸುತ್ತಿದೆ. ಇಂತಹ ವೇಳೆಯಲ್ಲಿ ನಮ್ಮ ಪ್ರಧಾನಿಯವರು ಮತ್ತೆ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ್ದಾರೆ. ನಾವು ಬಹಳ ವಿಷಯದಲ್ಲಿ ಮೊದಲಿಗರಾಗಿದ್ದು ವಿಶ್ವಗುರು ಆಗುವ ಅರ್ಹತೆ ಇದೆ ಎಂದು ಹೇಳಿದ್ದಾರೆ.

ಯೋಗ ದಿನಾಚರಣೆ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ಆಯೋಜಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಸಾಮಾನ್ಯ ಯೋಗ ಶಿಷ್ಟಾಚಾರದಂತೆ ಯೋಗ ತರಬೇತುದಾರ ಗೋಪಾಲಕೃಷ್ಣ ಎಸ್ ರವರು ಯೋಗಾಭ್ಯಾಸ ಮಾಡಿಸಿದರು. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ಅಪರ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು. ಈಶ್ವರೀಯ ಸಂಸ್ಥೆಯ ಮುಖ್ಯಸ್ಥೆ ಅನುಸೂಯಕ್ಕನವರು ಧ್ಯಾನದ ಮಹತ್ವ ತಿಳಿಸಿ, ಧ್ಯಾನ ಮಾಡಿಸಿದ್ದಾರೆ.

ಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಜಿ.ಪಂ ಮಾಜಿ ಸದಸ್ಯ ಕೆ.ಇ ಕಾಂತೇಶ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ, ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲ ಎಂ.ಎಸ್.ದೊಡ್ಮನಿ, ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಈಶ್ವರೀಯ ಸಂಸ್ಥೆ ಸೇರಿದಂತೆ ವಿವಿಧ ಯೋಗ ಸಂಸ್ಥೆಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ‌ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿ

Senior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್...

State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆ

State Film Awards 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ...

Klive Special ಹೆತ್ತವಳಿಗೊಂದು ಕವನ-ನಮನ

Klive Special ದೇವರ ಸ್ವರೂಪ ಗರ್ಭದಲ್ಲಿ ಹೊತ್ತುನವಮಾಸಕ್ಕೆ ಹೆತ್ತುಮೌಲ್ಯಗಳನ್ನೇ ಬಿತ್ತುಸಲಹಿದೆ ನೀಡಿ ಕೈತುತ್ತು ಅಮ್ಮ...

Guarantee Scheme ಸತ್ಯ & ಶುದ್ಧ ಮಾರ್ಗದಿಂದ ರಾಷ್ಟ್ರ ಕಟ್ಟಲು ಸಾಧ್ಯ- ಸಿ.ಎಸ್.ಚಂದ್ರಭೂಪಾಲ್

Guarantee Scheme ಅಂತರಂಗ ಮತ್ತು ಬಹಿರಂಗ ಶುದ್ದಿಯಿಂದ ಹಾಗೂ ಸತ್ಯದ ಮಾರ್ಗದಲ್ಲಿ...