ಕಾಶಿಯಾತ್ರೆಗೆ ಹೋಗುವ ಭಕ್ತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಲಿದೆ. ಮುಜರಾಯಿ ಇಲಾಖೆ ವತಿಯಿಂದ ಭಕ್ತರಿಗೆ ಉಚಿತವಾಗಿ ಕಾಶಿಯಾತ್ರೆ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಿಂದ ಹೊರಡಲಿರುವ ಕಾಶಿಯಾತ್ರೆಗೆ ಅಗಸ್ಟ್ ನಲ್ಲಿ ಚಾಲನೆ ನೀಡಲಾಗುತ್ತದೆ. ಒಂದು ವಾರದ ಕಾಶಿ ಯಾತ್ರೆಯಲ್ಲಿ ಅಯೋಧ್ಯ, ಕಾಶಿ, ಪ್ರಯಾಗ ದರ್ಶನ ಮಾಡಿಸಲಾಗುತ್ತದೆ. ಕಾಶಿಯಾತ್ರಾರ್ಥಿಗಳಿಗಾಗಿ ವಿಶೇಷ ರೈಲಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ.
ಉಡುಪಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು ಮುಜರಾಯಿ ಬರುವ ಅಗಸ್ಟ್, ಶ್ರಾವಣ ಮಾಸದಲ್ಲಿ ರಾಜ್ಯದ 30,000 ಭಕ್ತರಿಗೆ ಉಚಿತವಾಗಿ ಕಾಶಿಯಾತ್ರೆ ಯೋಜನೆಯನ್ನು ಹಮ್ಮಿಕೊಳ್ಳಲಾಗಿದ್ದು, ಯಾತ್ರೆ ಕೈಗೊಳ್ಳುವವರ ಬ್ಯಾಂಕ್ ಖಾತೆಗೆ ಸರ್ಕಾರದ ವತಿಯಿಂದ 5000 ರೂ. ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.