ಭಾರತವು ಒದಗಿಸುವ ಹಣಕಾಸಿನ ನೆರವು ದೇಣಿಗೆಯಲ್ಲ ಎಂದು ಶ್ರೀಲಂಕಾದ ಪ್ರಧಾನ ಮಂತ್ರಿ ರಾನಿಲ್ ವಿಕ್ರಮಸಿಂಘೆ ಸ್ಪಷ್ಟಪಡಿಸಿದ್ದಾರೆ.
ಸಂಸತ್ತಿನಲ್ಲಿ ಮಾತನಾಡಿದ ಅವರು, ಭಾರತದಿಂದ ಕ್ರೆಡಿಟ್ ಲೈನ್ ಅಡಿಯಲ್ಲಿ 31,32,54,000 ರೂ. ಮೊತ್ತದ ಸಾಲವನ್ನು ತೆಗೆದುಕೊಂಡಿದ್ದೇವೆ. ಭಾರತವು ಈ ರೀತಿ ನಮ್ಮನ್ನು ನಿರಂತರವಾಗಿ ಬೆಂಬಲಿಸಲು ಸಾಧ್ಯವಾಗುವುದಿಲ್ಲ. ಅವರ ಸಹಾಯಕ್ಕೂ ಮಿತಿ ಇರುತ್ತದೆ. ಇದರಿಂದಾಗಿ ನಾವು ಸಾಲವನ್ನು ಮರುಪಾವತಿಸಬೇಕು ಎಂದು ತಿಳಿಸಿದರು.
ದೇಶವು ತೀವ್ರ ಆರ್ಥಿಕ ಬಿಕ್ಕಟ್ಟನ್ನು ಅನುಭವಿಸುತ್ತಿರುವುದರಿಂದ ಭಾರತವು ಹಣವನ್ನು ಸಾಲದ ರೂಪದಲ್ಲಿ ನೀಡಿದೆ. ಇದನ್ನು ಮರುಪಾವತಿ ಮಾಡಲು ಯೋಜನೆಯನ್ನು ಹೊಂದಬೇಕು ಎಂದು ತಿಳಿಸಿದರು.