ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಕಳಪೆ ರಸ್ತೆಗಳನ್ನು ದುರಸ್ಥಿತಿಗೊಳಿಸಿದ್ದರ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ಬಳಿಯ ರಸ್ತೆಯನ್ನು ಮೋದಿ ಅವರು ಬೇಸ್ ಕ್ಯಾಂಪಸ್ ಅನ್ನು ಉದ್ಘಾಟಿಸಲು ಭೇಟಿ ನೀಡುವ ಕೆಲವು ದಿನಗಳಷ್ಟೇ ರಸ್ತೆಯನ್ನು ಸರಿ ಮಾಡಿದ್ದರು. ಇದೀಗ ಕಳಪೆ ಕಾಮಗಾರಿಯ ಬಗ್ಗೆ ತನಿಖೆ ನಡೆಸುವಂತೆ, ಹಾಗೂ ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.