ರಾಷ್ಟ್ರಪತಿ ಹುದ್ದೆಗೆ ತನ್ನನ್ನು ಬೆಂಬಲಿಸಿ ಎಂದು ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ,ಎನ್ ಸಿಪಿ ವರಿಷ್ಠ ಶರದ್ ಪವಾರ್ ಹಾಗೂ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿಗೆ ಕರೆ ಮಾಡಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ದ್ರೌಪದಿ ಮುರ್ಮು ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಕೇಂದ್ರ ಸಚಿವರ ಸಮ್ಮುಖದಲ್ಲಿ ರಾಷ್ಟ್ರಪತಿ ಚುನಾವಣೆಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು.
ಕಾಂಗ್ರೆಸ್, ಟಿಎಂಸಿ ನೇತೃತ್ವದ ವಿಪಕ್ಷಗಳು ಹಿರಿಯ ಮುಖಂಡ ಯಶವಂತ ಸಿನ್ಹಾ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಿವೆ.