ಹಿಜಾಬ್ ವಿವಾದದಿಂದ ರಾಜ್ಯಾದ್ಯಂತ ಸುದ್ದಿಯಾಗಿದ್ದ ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಆಶ್ಚರ್ಯಕರ ಬೆಳವಣಿಗೆ ನಡೆದಿದೆ.
ಹಿಜಾಬ್ ಬೇಕು ಅಂತ ಪಟ್ಟು ಹಿಡಿದು ಕಾಲೇಜಿನ ವಿರುದ್ಧವೇ ಹೋರಾಟಕ್ಕೆ ಇಳಿದಿದ್ದ 15 ಮಂದಿ ವಿದ್ಯಾರ್ಥಿನಿಯರ ಪೈಕಿ ಒಬ್ಬಾಕೆ ಪ್ರಾಂಶುಪಾಲರ ಬಳಿ ಕ್ಷಮೆಯಾಚಿಸಿ ಕಾಲೇಜಿನ ನಿಯಮವನ್ನು ಅನುಸರಿಸಿ ಕಾಲೇಜಿಗೆ ಬರಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಮಂಗಳೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಮೂವರು ವಿದ್ಯಾರ್ಥಿನಿಯರ ಪೈಕಿ ಒಬ್ಬಾಕೆ ಧಾರ್ಮಿಕ ಕಟ್ಟುಪಾಡುಗಳನ್ನು ಕಾಲೇಜಿನ ಒಳಗೆ ಅನುಸರಿಸದೇ, ಕಾಲೇಜಿನ ನಿಯಮಗಳನ್ನು ಪಾಲಿಸಿ ತರಗತಿಗೆ ಬರುವುದಾಗಿ ಪ್ರಾಂಶುಪಾಲರ ಬಳಿ ತನ್ನ ಹೆತ್ತವರ ಸಮ್ಮುಖದಲ್ಲಿ ಕ್ಷಮೆಯಾಚಿಸಿರುವುದು ಬೆಳಕಿಗೆ ಬಂದಿದೆ.