ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಸುಮಾರು 462 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆ ಅರ್ಜಿ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಕೃಷಿ ಇಲಾಖೆಯಲ್ಲಿ ಕೆಲಸ ಮಾಡುವ ಇಚ್ಛೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 25 ಆಗಿದೆ.
ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ಹುದ್ದೆಗಳಿಗೆ ಈ ಹಿಂದೆ ಅರ್ಜಿ ಸಲ್ಲಿಕೆಗೆ ಜೂನ್ 1 ಕಡೆಯ ದಿನಾಂಕವಾಗಿತ್ತು.
ಇದೀಗ ಅರ್ಜಿ ಸಲ್ಲಿಕೆ ದಿನಾಂಕವನ್ನು ಜೂನ್ 25ರವರೆಗೆ ವಿಸ್ತರಣೆ ಮಾಡಲಾಗಿದೆ.
ಅಭ್ಯರ್ಥಿಗಳಿಗೆ ಎರಡು ಹಂತದ ಆನ್ಲೈನ್ ಪರೀಕ್ಷೆ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
10ನೇ ತರಗತಿಅಂಕಪಟ್ಟಿ
ಡಿಗ್ರಿ ಅಂಕಪಟ್ಟಿ
ಆಧಾರ ಕಾರ್ಡ್
ಜಾತಿ ಪ್ರಮಾಣ ಪತ್ರ
ಪೋಟೋ ಮತ್ತು ಸಹಿ
ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು ಮೊದಲಾದ ದಾಖಲಾತಿಗಳು ಇರತಕ್ಕದ್ದು.
ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ – 1200 ರೂ
ಒಬಿಸಿ ವರ್ಗ ಅಭ್ಯರ್ಥಿಗಳಿಗೆ – 1200 ರೂ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ, ಅಂಗವಿಕಲ ಅಭ್ಯರ್ಥಿಗಳಿಗೆ- 500 ರೂ. ಶುಲ್ಕವಿರುತ್ತದೆ.
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ಮುಖಾಂತರ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.