ಕೇಂದ್ರ ವಾಣಿಜ್ಯ ಸಚಿವಾಲಯದಲ್ಲ 65 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಯಂಗ್ ಪ್ರೊಫೆಷನಲ್ ಅಸೋಸಿಯೇಟ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪದವಿ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಮೂಲಕ ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಅವಕಾಶವನ್ನು ಪಡೆಯಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 13 ಆಗಿದೆ.
ಕೇಂದ್ರ ವಾಣಿಜ್ಯ ಸಚಿವಾಲಯದಿಂದ ಆಹ್ವಾನಿಸಲಾದ ಈ ಹುದ್ದೆಗಳು ಗುತ್ತಿಗೆ ಆಧಾರಿತವಾಗಿದೆ. ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ ಮತ್ತು ಆಯ್ಕೆ ಪ್ರಕ್ರಿಯೆ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ.
ಸಂಸ್ಥೆಯ ಹೆಸರು: ವಾಣಿಜ್ಯ ಸಚಿವಾಲಯ (ವಾಣಿಜ್ಯ ಸಚಿವಾಲಯ)
ಹುದ್ದೆಯ ಹೆಸರು: ಯಂಗ್ ಪ್ರೊಫೆಷನಲ್, ಅಸೋಸಿಯೇಟ್
ಹುದ್ದೆಗಳ ಸಂಖ್ಯೆ: 65
ಉದ್ಯೋಗ ಸ್ಥಳ: ಅಖಿಲ ಭಾರತ
ಸಂಬಳ: 60000-330000 ರೂ.
ವಾಣಿಜ್ಯ ಸಚಿವಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿಟೆಕ್, ಎಲ್ಎಲ್ಎಂ ಸ್ನಾತಕೋತ್ತರ ಪದವಿ, ಜೊತೆಗೆ ಎಂಬಿಎ ಪೂರ್ಣಗೊಳಿಸಿರಬೇಕು.