ರಾಜ್ಯ ಸರ್ಕಾರವು ಈ ವರ್ಷದಿಂದ ನಾಡಪ್ರಭು ಕೆಂಪೇಗೌಡರ ಗೌರವಾರ್ಥ ನೀಡುವ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ, ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಮತ್ತು ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರನ್ನು ಆಯ್ಕೆ ಮಾಡಲಾಗಿದೆ.
ಜೂನ್ 27ರ ವಿಧಾನಸೌಧದಲ್ಲಿ ನಡೆಯಲಿರುವ ಕೆಂಪೇಗೌಡರ 513ನೇ ಜಯಂತಿ ಕಾರ್ಯಕ್ರಮದಲ್ಲಿ ಮೂವರಿಗೂ ತಲಾ 5 ಲಕ್ಷ ರೂಪಾಯಿ ನಗದುಸಹಿತ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಿ ಕೊಡಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ತಿಳಿಸಿದ್ದಾರೆ.