Thursday, May 28, 2026
Thursday, May 28, 2026

ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ಟೆಂಡರ್ ಪ್ರಕ್ರಿಯೆಗೆ ಸೀಎಂ ಸೂಚನೆ

Date:

ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟಕ್ಕೆ 430 ಮೀಟರ್ ರೋಪ್ ವೇ ನಿರ್ಮಿಸಲು ಪ್ರಸ್ತಾಪಿಸಲಾಗಿದೆ. ಈ ಯೋಜನೆಯ ಟೆಂಡರ್ ಪ್ರಕ್ರಿಯೆಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸುವಂತೆ ಪ್ರವಾಸೋದ್ಯಮ ಇಲಾಖೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಯೋಜನೆ ಕುರಿತು ಕರೆಯಲಾಗಿದ್ದ ಸಭೆಯಲ್ಲಿ ಮಾತನಾಡಿದ ಅವರು, ಈ ಯೋಜನೆಯಡಿ ರೋಪ್‍ ವೇ ಬೇಸ್‍ನಲ್ಲಿ ಪ್ರವಾಸಿಗರಿಗೆ ಅಗತ್ಯ ಸೌಕರ್ಯ, ಸರದಿಯಲ್ಲಿ ಕಾಯುವ ಸಂದರ್ಭ ಬಂದಾಗ ಅಗತ್ಯ ಮೂಲಸೌಕರ್ಯಗಳು, ಪಾರ್ಕಿಂಗ್ ಸೌಲಭ್ಯಗಳನ್ನು ಕಲ್ಪಿಸಲು ಸೂಚಿಸಿದರು. ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಬೊಮ್ಮಾಯಿ ಸೂಚಿಸಿದ್ದಾರೆ.

ಜುಲೈ 15 ರೊಳಗೆ ತಾವು ಖುದ್ದು ಅಂಜನಾದ್ರಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಸಿದ್ಧರಾಮಯ್ಯ ರಾಜೀನಾಮೆ? ಡಿ.ಕೆ.ಶಿವಕುಮಾರ್ ಗೆ ಸೀಎಂ ಪಟ್ಟ?.

Breaking News ನವದೆಹಲಿಯಲ್ಲಿ ರಾಜಕೀಯ ಚಟುವಟಿಕೆ ಬಿರುಸಾಗಿ ನಡೆದಿದೆ. ರಾಜ್ಯದ ಕಾಂಗ್ರೆಸ್...

Akashavani Bhadravati ಜೂನ್ 2. ಭದ್ರಾವತಿ ಆಕಾಶವಾಣಿಯಿಂದ” ಬಾನುಲಿ ಬರಹ ” ವಿಶೇಷ ಕಾರ್ಯಾಗಾರ

Akashavani Bhadravati ಭಾರತದ ಸಾರ್ವಜನಿಕ ಪ್ರಸಾರ ಸೇವೆ ಸಂಸ್ಥೆಯಾದ ಪ್ರಸಾರ ಭಾರತಿಯ...

JCI Institute ಯುವ ನಾಯಕತ್ವ ಬೆಳವಣಿಗೆಯಲ್ಲಿ ಜೆಸಿಐ ಸಂಸ್ಥೆ ಸದಾ ಮುಂಚೂಣಿಯಲ್ಲಿದೆ- ವಿಜಯಲಕ್ಷ್ಮಿ ಕಡಂಬ.

JCI Institute ಸ್ಥಳೀಯ ಸಮಾಜಮುಖಿ ಕಾರ್ಯಗಳಲ್ಲಿ ಹಾಗೂ ಯುವ ನಾಯಕತ್ವದ ಬೆಳವಣಿಗೆಯಲ್ಲಿ...