Thursday, March 26, 2026
Thursday, March 26, 2026

ಐರ್ಲೆಂಡ್ ವಿರುದ್ಧದ ಮೊದಲ ಟಿ20 ಕ್ರಿಕೆಟ್ ಭಾರತಕ್ಕೆ ಜಯ

Date:

ಭಾರತ ಹಾಗೂಐರ್ಲೆಂಡ್ ವಿರುದ್ಧಧ ಮೊದಲ ಟಿ20 ಪಂದ್ಯದಲ್ಲಿ ಭಾರತ ಜಯ ಸಾಧಿಸಿದೆ.

ಮಳೆಯಿಂದಾಗಿ 12 ಓವರ್‌ಗಳಿಗೆ ಸೀಮಿತವಾದ ಪಂದ್ಯದಲ್ಲಿ ಐರ್ಲೆಂಡ್ ತಂಡ ಮೊದಲಿಗೆ ಬ್ಯಾಟಿಂಗ್ ಮಾಡಿ ಸವಾಲಿನ ಗುರಿ ನಿಗದಿಪಡಿಸಿತು.

ಆದರೆ, ಭಾರತ ತಂಡ ಈ ಮೊತ್ತವನ್ನು ಸುಲಭವಾಗಿ ಬೆನ್ನಟ್ಟುವಲ್ಲಿ ಯಶಸ್ವಿಯಾಗಿದೆ.

ಮೊದಲಿಗೆ ಬ್ಯಾಟಿಂಗ್ ನಡೆಸಿದ ಐರ್ಲೆಂಡ್ ತಂಡ ನಿಗದಿತ 12 ಓವರ್‌ಗಳಲ್ಲಿ 108 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿತು. ಐರ್ಲೆಂಡ್ ತಂಡದ ಪರವಾಗಿ ಹ್ಯಾರಿ ಟೆಕ್ಟರ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು.

33 ಎಸೆತಗಳನ್ನು ಎದುರಿಸಿದ ಟೆಕ್ಟರ್ 64 ರನ್‌ಗಳಿಸಿದ್ದಾರೆ. ಈ ಇನ್ನಿಂಗ್ಸ್‌ನಲ್ಲಿ ಅವರಿಂದ 6 ಬೌಂಡರಿ ಹಾಗೂ 3 ಸಿಕ್ಸರ್ ಸಿಡಿದಿತ್ತು. ಉಳಿದಂತೆ ಡಕ್ಕರ್ ಕೆಲ ಕಾಲ ಅವರಿಗೆ ಉತ್ತಮವಾಗಿ ಸಾಥ್ ನೀಡಿ 18 ರನ್‌ಗಳ ಕೊಡುಗೆ ನೀಡಿದರು.

ಭಾರತದ ಪರವಾಗಿ ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ ಮತ್ತು ಆವೇಶ್ ಖಾನ್ ಮತ್ತು ಚಾಹಲ್ ತಲಾ ಒಂದು ವಿಕೆಟ್ ಪಡೆದರು. ಭಾರತ ಐರ್ಲೆಂಡ್ ತಂಡದ 3 ವಿಕೆಟ್‌ಗಳನ್ನು ಪವರ್‌ಪ್ಲೇನಲ್ಲಿಯೇ ಪಡೆದುಕೊಂಡಿತು ಎಂಬುದು ವಿಶೇಷ.

ಇನ್ನು ಈ ಮೊತ್ತವನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ಇಶಾನ್ ಕಿಶನ್ ಜೊತೆಗೆ ಮೊದಲ ಬಾರಿಗೆ ಆರಂಭಿಕನಾಗಿ ಕಣಕ್ಕಿಳಿದ ದೀಪಕ್ ಹೂಡಾ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಇಶಾನ್ ಕಿಶನ್ 11 ಎಸೆತಗಳಲ್ಲಿ 26 ರನ್ ಸಿಡಿಸಿ ಕ್ರೇಗ್ ಯಂಗ್‌ಗೆ ಬೌಲ್ಡ್ ಆದರು. ನಂತರ ಬಂದ ಸೂರ್ಯಕುಮಾರ್ ಯಾದವ್ ಒಂದೇ ಎಸೆತಕ್ಕೆ ಶೂನ್ಯ ಸುತ್ತಿ ಫೆವಿಲಿಯನ್ ಸೇರಿಕೊಂಡರು. ನಂತರ ಬ್ಯಾಟಿಂಗ್‌ಗೆ ಇಳಿದ ನಾಯಕ ಹಾರ್ದಿಕ್ ಪಾಂಡ್ಯ 12 ಎಸೆತಗಳಲ್ಲಿ 24 ರನ್‌ಗಳ ಕೊಡುಗೆ ನೀಡಿ ವಿಕೆಟ್ ಕಳೆದುಕೊಂಡರು.

ಇನ್ನು ಆರಂಭಿಕನಾಗಿ ಕಣಕ್ಕಿಳಿದ ದೀಪಕ್ ಹೂಡಾ ಅಂತಿಮ ಹಂತದವರೆಗೂ ಅಜೇಯವಾಗುಳಿದು ತಂಡವನ್ನು ಗೆಲುವಿನ ದಡ ಸೇರಿಸಿದರು. 29 ಎಸೆತ ಎದುರಿಸಿದ ಹೂಡಾ 47 ರನ್‌ಗಳಿಸಿದ್ದಾರೆ. ದಿನೇಶ್ ಕಾರ್ತಿಕ್ 5 ರನ್‌ಗಳಿಸಿದ್ದಾರೆ. ಈ ಮೂಲಕ ಭಾರತ ಇನ್ನೂ 16 ಎಸೆತಗಳು ಬಾಕಿಯಿರುವಂತೆಯೇ ಭರ್ಜರಿಯಾಗಿ ಗೆಲುವು ಸಾಧಿಸಿದೆ.

ಐರ್ಲೆಂಡ್ ಆಡುವ ಬಳಗ: ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಗರೆಥ್ ಡೆಲಾನಿ, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಆಂಡಿ ಮ್ಯಾಕ್‌ಬ್ರೈನ್, ಕ್ರೇಗ್ ಯಂಗ್, ಜೋಶುವಾ ಲಿಟಲ್, ಕಾನರ್ ಓಲ್ಫರ್ಟ್

ಭಾರತದ ಆಡುವ ಬಳಗ, ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...