ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಶಿವಪ್ಪ ನಾಯಕ ಸರ್ಕಲ್ ನಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ವಿದ್ಯಾರ್ಥಿಗಳ ಹಾಗೂ ಯುವಕರ ಆಕ್ರೋಶವನ್ನು ಬೆಂಬಲಿಸಿ ಅಗ್ನಿಪಥ್ ಯೋಜನೆಯನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆಯನ್ನು ಮಾಡಿದರು.
ಅಗ್ನಿಪಥ್ ಯೋಜನೆ ಯನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹ ಪಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸುಂದರೇಶ್ ಅವರ ನೇತೃತ್ವದಲ್ಲಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರುಗಳ ಉಪಸ್ಥಿತಿಯಲ್ಲಿ ಧರಣಿ ಸತ್ಯಾಗ್ರಹವನ್ನು ಮಾಡಲಾಯಿತು.
ದೇಶಾದ್ಯಂತ ವಿರೋಧಕ್ಕೆ ಕಾರಣವಾಗಿರುವ ಕೇಂದ್ರದ ಬಿಜೆಪಿ ಸರ್ಕಾರದ ನೂತನ ಅಗ್ನಿಪಥ್ ಯೋಜನೆಯ ಕಾಯ್ದೆ ಅಡಿಯಲ್ಲಿ ಅಗ್ನಿ ವೀರರನ್ನು ನಾಲ್ಕು ವರ್ಷಗಳ ಅವಧಿಗೆ
ನೇಮಿಸಿಕೊಳ್ಳಲಾಗುತ್ತದೆ. ವರ್ಷಗಳ ನಿಗದಿತ ಒಪ್ಪಂದದ ಅವಧಿಯನ್ನು ಮೀರಿ ಅಗ್ನಿವೀರರನ್ನು ಮುಂದುವರೆಸುವುದಿಲ್ಲ ಎಂದು ಅಗ್ನಿಪಥ್ ಯೋಜನೆಯ ಕಾಯ್ದೆಯಾಗಿದೆ. ಇದರಿಂದಾಗಿ ಸೇನಾ ಆಕಾಂಕ್ಷಿಗಳಾದ ಯುವಕರು ತೀವ್ರ ಅಸಮಾಧಾನಗೊಂಡು ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಭಾರಿ ಪ್ರತಿಭಟನೆ ಮೂಲಕ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಗಡಿಬಿಡಿಯಲ್ಲಿ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಧರಣಿ ಸತ್ಯಾಗ್ರಹವನ್ನು ನಡೆಸಿದೆ.
ಕೇಂದ್ರದ ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸಲಾಗದೆ ಅಗ್ನಿಪಥ್ ಯೋಜನೆ ಮೂಲಕ ಯುವಕರನ್ನು ಅದರಲ್ಲೂ ಮುಖ್ಯವಾಗಿ ಸೇನಾ ಆಕಾಂಕ್ಷಿಗಳನ್ನು ಬೀದಿಗೆ ತಂದು ಅವರ ಭವಿಷ್ಯದ ಜೊತೆಗೆ ಆಟವಾಡುತ್ತಿದೆ. ಅಗ್ನಿಪಥ್ ಯೋಜನೆ ದೇಶದ ಭದ್ರತೆ ಮತ್ತು ಯುವಕರನ್ನು ಭವಿಷ್ಯಕ್ಕೆ ಮಾರಕವಾಗಿದೆ. ಆದ್ದರಿಂದ ತಕ್ಷಣವೇ ಹಿಂಪಡೆಯಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಪ್ರತಿಭಟನೆ ಮೂಲಕ ಆಗ್ರಹಿಸಿದರು.